ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೇರಿದಂತೆ ಜಿ20 ನಾಯಕರು ದೆಹಲಿಯ ರಾಜ್‌ಘಾಟ್‌ಗೆ ಭೇಟಿ ನೀಡಿದ್ದು, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದ್ದಾರೆ.
ರಾಜ್‌ಘಾಟ್ ಆವರಣಕ್ಕೆ ಪ್ರವೇಶಿಸಿದ ಅಧ್ಯಕ್ಷ ಜೋ ಬೈಡನ್ ಅವರನ್ನು ಪ್ರಧಾನಿ ಮೋದಿ ಬರಮಾಡಿಕೊಂಡಿದ್ದು, ಅವರಿಗೆ ಖಾದಿ ಉಡುಗೊರೆಯನ್ನು ನೀಡಿದ್ದಾರೆ.
ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್, ಇಂಡೋನೇಷ್ಯಾ ಅಧ್ಯಕ್ಷ ಜೋಕೋ ವಿಡೋಡೋ, ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ, ಓಮನ್ ಉಪಪ್ರಧಾನಿ ಅಸಾದ್ ಬಿನ್ ತಾರಿಕ್ ಬಿನ್ ತೈಮೂರ್ ಅಲ್ ಸೈದ್, ಸಿಂಗಪುರದ ಪ್ರಧಾನಿ ಲೀ ಸೀನ್ ಲೂಂಗ್ ಹಾಗೂ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸೇರಿದಂತೆ ಇತರ ನಾಯಕರು ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ಇದಲ್ಲದೆ, ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್, ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ವಿಶ್ವಬ್ಯಾಂಕ್ ಮುಖ್ಯಸ್ಥ ಅಜಯ್ ಬಾಂಗಾ, ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಅಧ್ಯಕ್ಷೆ ಕ್ರಿಸ್ಟಲಿನಾ ಜಾರ್ಜಿಯೆವಾ ಮತ್ತು ಇತರ ಪ್ರತಿನಿಧಿಗಳು ಕೂಡ ಗೌರವ ಸಲ್ಲಿಸಲು ರಾಜ್‌ಘಾಟ್‌ಗೆ ಆಗಮಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.