ADVERTISEMENT

ಜೀವ ಮತ್ತು ವೈದ್ಯಕೀಯ ವಿಮಾ ಕಂತಿನ ಮೇಲಿನ GST ತೆಗೆದು ಹಾಕಲು ಗಡ್ಕರಿ ಮನವಿ

ಪಿಟಿಐ
Published 31 ಜುಲೈ 2024, 11:29 IST
Last Updated 31 ಜುಲೈ 2024, 11:29 IST
<div class="paragraphs"><p>ನಿರ್ಮಲಾ ಸೀತಾರಾಮನ್ ಮತ್ತು ನಿತಿನ್ ಗಡ್ಕರಿ</p></div>

ನಿರ್ಮಲಾ ಸೀತಾರಾಮನ್ ಮತ್ತು ನಿತಿನ್ ಗಡ್ಕರಿ

   

ನವದೆಹಲಿ: ಜೀವ ವಿಮೆ ಮತ್ತು ವೈದ್ಯಕೀಯ ವಿಮೆ ಕಂತಿನ ಮೇಲೆ ವಿಧಿಸುತ್ತಿರುವ ಶೇ 18ರಷ್ಟು ಜಿಎಸ್‌ಟಿಯನ್ನು ತೆಗೆದುಹಾಕಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತಂತೆ ಹಣಕಾಸು ಸಚಿವೆಗೆ ಪತ್ರ ಬರೆದಿರುವ ಅವರು, 'ಜೀವ ವಿಮಾ ಕಂತಿನ ಮೇಲೆ ತೆರಿಗೆ ವಿಧಿಸುವುದೆಂದರೆ ಜೀವನ ಅನಿಶ್ಚಿತತೆ ಮೇಲೆ ತೆರಿಗೆ ವಿಧಿಸಿದಂತೆ. ಕುಟುಂಬಕ್ಕೆ ರಕ್ಷಣೆ ನೀಡಲು ಬದುಕಿನ ಅನಿಶ್ಚಿತತೆಗಳಿಗೆ ವಿಮೆಯನ್ನು ಖರೀದಿಸುವ ವ್ಯಕ್ತಿಗೆ ತೆರಿಗೆ ವಿಧಿಸುವುದು ಸರಿಯಲ್ಲ’ ಎಂದು ಹೇಳಿದ್ದಾರೆ.

ADVERTISEMENT

‘ಜೀವ ವಿಮೆ ಮತ್ತು ವೈದ್ಯಕೀಯ ವಿಮೆ ಕಂತುಗಳ ಮೇಲೆ ವಿಧಿಸುತ್ತಿರುವ ಜಿಎಸ್‌ಟಿಯು ಈ ವಲಯದ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತಿದೆ. ವಿಮಾ ಕಂತುಗಳ ಮೇಲಿನ ಜಿಎಸ್‌ಟಿಯನ್ನು ಹಿಂತೆಗೆದುಕೊಳ್ಳುವ ಸಲಹೆಯನ್ನು ಆದ್ಯತೆಯ ಮೇರೆಗೆ ಪರಿಗಣಿಸಬೇಕಿದೆ. ವಿಶೇಷವಾಗಿ ಹಿರಿಯ ನಾಗರಿಕರಿಗೆ ಇದು ಹೊರೆಯಾಗಿದೆ’ ಎಂದಿದ್ದಾರೆ.

ಜೀವ ವಿಮೆ ಮತ್ತು ವೈದ್ಯಕೀಯ ವಿಮಾ ಪ್ರೀಮಿಯಂಗಳೆರಡೂ ಶೇ 18ರಷ್ಟು ಜಿಎಸ್‌ಟಿಗೆ ಒಳಪಟ್ಟಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.