ಶ್ರೀಹರಿಕೋಟಾ(ಆಂಧ್ರಪ್ರದೇಶ): ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಮಾನವ ಸಹಿತ ಗಗನಯಾನ ಪರೀಕ್ಷೆಯ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ.
ಟೆಸ್ಟ್ ವೆಹಿಕಲ್ ಡೆವಲಪ್‌ಮೆಂಟ್ ಫ್ಲೈಟ್ ಮಿಷನ್-1 (ಟಿವಿ-ಡಿ1 ಫ್ಲೈಟ್ ಟೆಸ್ಟ್) ಎಂದು ಹೆಸರಿಸಲಾದ ಮೊದಲ ಮಾನವ ಸಹಿತ ಗಗನಯಾನ ಪರೀಕ್ಷೆಯನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಇಂದು ಬೆಳಿಗ್ಗೆ 8 ಗಂಟೆಗೆ ಇಸ್ರೋ ಉಡಾವಣೆ ಮಾಡಲಿದೆ. "ಉಡಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದೆ" ಎಂದು ಇಸ್ರೋ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ಈ ಫ್ಲೈಟ್ ಟೆಸ್ಟ್ ವೆಹಿಕಲ್ ಅಬಾರ್ಟ್ ಮಿಷನ್ ಗಗನಯಾನ ಮಿಷನ್‌ನ ಭಾಗವಾಗಿದ್ದು, ಕ್ರ್ಯೂ ಎಸ್ಕೇಪ್ ಸಿಸ್ಟಮ್‌ನ ಕಾರ್ಯಕ್ಷಮತೆಯನ್ನು ಹೊಂದಿದೆ. ರಾಕೆಟ್ ಉಡಾವಣೆ ನಂತರ ಬಂಗಾಳಕೊಲ್ಲಿಯಲ್ಲಿ ಸುರಕ್ಷಿತ ಲ್ಯಾಂಡಿಂಗ್ ಅನ್ನು ಸಹ ಇದು ಪರೀಕ್ಷಿಸಲಿದೆ.
ಈ ಮಿಷನ್ ಮಾನವನನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಸಾಧ್ಯ ಎಂಬುದನ್ನು ಸಾಬೀತುಪಡಿಸುವ ಭಾರತದ ಪ್ರಯತ್ನದಲ್ಲಿ ಮಹತ್ವದ ಮೈಲಿಗಲ್ಲು. ಪರೀಕ್ಷಾ ಹಾರಾಟದ ಯೋಜನೆ 3 ದಿನಗಳ ಕಾರ್ಯಾಚರಣೆಗಾಗಿ 400 ಕಿ.ಮೀ ಕಕ್ಷೆಗೆ ಮೂವರು ಸಿಬ್ಬಂದಿಯನ್ನು ಕಳುಹಿಸುವ ಮತ್ತು ಬಂಗಾಳಕೊಲ್ಲಿಯಲ್ಲಿ ಅವರನ್ನು ಸುರಕ್ಷಿತವಾಗಿ ಭೂಮಿಗೆ ಇಳಿಸುವ ಗುರಿಯನ್ನು ಹೊಂದಿದೆ. ಈ ಮೂಲಕ ಯುಎಸ್, ರಷ್ಯಾ ಮತ್ತು ಚೀನಾದ ನಂತರ ಮಾನವಸಹಿತ ಬಾಹ್ಯಾಕಾಶ ಯಾನವನ್ನು ಪ್ರಾರಂಭಿಸುವ ನಾಲ್ಕನೇ ರಾಷ್ಟ್ರವಾಗಿ ಭಾರತ ಹೊರಹೊಮ್ಮಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.