ಶ್ರೀನಗರ: ಕಾಶ್ಮೀರದ ಗಾಂದರ್‌ಬಲ್ ಜಿಲ್ಲೆಯ ಗಗನ್‌ಗೀರ್‌ನಲ್ಲಿ ಭಾನುವಾರ ನಡೆದ ಉಗ್ರರ ದಾಳಿ ನಡೆದ ಸ್ಥಳಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಹಿರಿಯ ಅಧಿಕಾರಿಗಳನ್ನು ಒಳಗೊಂಡ ನಾಲ್ವರು ಸದಸ್ಯರ ತಂಡವು ಸೋಮವಾರ ಭೇಟಿ ನೀಡಿ, ಆರು ಮಂದಿ ಹತ್ಯೆಯಾದ ಸ್ಥಳದಲ್ಲಿ ವಿಧಿವಿಜ್ಞಾನ ತಂಡವು ಪರಿಶೀಲನೆ ನಡೆಸಿತು.
ಈ ಪ್ರಕರಣದ ತನಿಖೆಯನ್ನು ಎನ್‌ಐಗೆ ವಹಿಸಲು ಕೇಂದ್ರ ಗೃಹ ಸಚಿವಾಲಯವು ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಎನ್‌ಐಎ ಅಧಿಕಾರಿಗಳು ಭೇಟಿ ನೀಡಿದ್ದು, ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಿದ್ದಾರೆ.
‘ಜಿಲ್ಲೆಯ ಗುಂಡ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಮಾರ್ಗದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಇಬ್ಬರು ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ದೊಡ್ಡ ಪ್ರಮಾಣದಲ್ಲಿ ಜೀವ ಹಾನಿಗೊಳಿಸುವ ಯೋಜನೆ ರೂಪಿಸಿದ್ದರು. ದಾಳಿಗೂ ಮುನ್ನ ಸಾಕಷ್ಟು ಪೂರ್ವ ತಯಾರಿ ನಡೆಸಿದಂತೆ ಕಂಡುಬರುತ್ತಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಪಾಕಿಸ್ತಾನದ ಮೂಲದ ಲಷ್ಕರ್–ಎ–ತಯಬಾದ ಸಹ ಸಂಘಟನೆಯಾದ ‘ದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ದಾಳಿಯ ಹೊಣೆ ಹೊತ್ತುಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.