ADVERTISEMENT

ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ

ಮುಂಬೈನ ಹೋಟೆಲ್ ಉದ್ಯಮಿ ಜಯಾ ಶೆಟ್ಟಿ ಹತ್ಯೆ ಪ್ರಕರಣ

ಪಿಟಿಐ
Published 30 ಮೇ 2024, 16:16 IST
Last Updated 30 ಮೇ 2024, 16:16 IST
ಛೋಟಾ ರಾಜನ್
ಛೋಟಾ ರಾಜನ್   

ಮುಂಬೈ: 2001ರಲ್ಲಿ ಇಲ್ಲಿನ ಹೋಟೆಲ್ ಉದ್ಯಮಿ ಜಯಾ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್‌ಗೆ ಮುಂಬೈನ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ(ಎಂಸಿಒಸಿಎ) ಸ್ಥಾಪಿಸಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ.ಎಂ.ಪಾಟೀಲ ಅವರು ರಾಜನ್ ಅಪರಾಧಿ ಎಂದು ಘೋಷಿಸಿದರು.

ಜಯಾ ಶೆಟ್ಟಿ ಅವರು ಮುಂಬೈನ ಗಾಮ್ದೇವಿಯಲ್ಲಿ ಗೋಲ್ಡನ್ ಕ್ರೌನ್ ಹೋಟೆಲ್ ಹೊಂದಿದ್ದರು. 2001ರ ಮೇ 4ರಂದು ಹೋಟೆಲ್‌ನ ಮೊದಲ ಮಹಡಿಯಲ್ಲಿ ರಾಜನ್‌ ಗ್ಯಾಂಗ್‌ನ ಇಬ್ಬರು ಆರೋಪಿಗಳು ಶೆಟ್ಟಿಯನ್ನು ಗುಂಡಿಕ್ಕಿ ಕೊಂದಿದ್ದರು.

ADVERTISEMENT

ಹೋಟೆಲ್ ಮ್ಯಾನೇಜರ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದರು. ಶೆಟ್ಟಿಗೆ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಹೇಮಂತ್ ಪೂಜಾರಿಯಿಂದ ಸುಲಿಗೆ ಕರೆಗಳು ಬಂದಿದ್ದವು. ಹಣ ನೀಡದಿದ್ದರಿಂದ ಕೊಲ್ಲಲ್ಲಾಗಿತ್ತು ಎಂಬುದು ತನಿಖೆಯಲ್ಲಿ ಗೊತ್ತಾಗಿತ್ತು. 

ನ್ಯಾಯಾಲಯದ ವಿವರವಾದ ಆದೇಶ ಇನ್ನೂ ಲಭ್ಯವಾಗಿಲ್ಲ. ರಾಜನ್ ಪ್ರಸ್ತುತ ಪತ್ರಕರ್ತರೊಬ್ಬರ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ತಿಹಾರ್ ಜೈಲಿನಲ್ಲಿದ್ದಾನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.