ವಿಶಾಖಪಟ್ಟಣ: ಆಂಧ್ರ ಪ್ರದೇಶದ ವಿಶೇಷ ಆರ್ಥಿಕ ವಲಯ (ಎಸ್‌ಇಝೆಡ್)ದಲ್ಲಿರುವ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆ ಉಂಟಾಗಿ 50ಕ್ಕೂ ಅಧಿಕ ಮಹಿಳಾ ಕಾರ್ಮಿಕರು ಅಸ್ವಸ್ಥರಾಗಿದ್ದಾರೆ.
ಬ್ರಾಂಡಿಕ್ಸ್ ಎಸ್‌ಇಝೆಡ್‌ನಲ್ಲಿ ಉಡುಪು ತಯಾರಿಕಾ ಘಟಕದಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
ಅನಿಲ ಸೋರಿಕೆಯಿಂದಾಗಿ ಅಸ್ವಸ್ಥಗೊಂಡ ಕಾರ್ಮಿಕರನ್ನು ಸ್ಥಳೀಯ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅನಿಲ ಸೋರಿಕೆಗೆ ತಕ್ಷಣದ ಕಾರಣವೇನು ಎನ್ನುವುದು ತಿಳಿದುಬಂದಿಲ್ಲ, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಜೂನ್ 3ರಂದು ಇದೇ ಪ್ರದೇಶದಲ್ಲಿ ಅನಿಲ ಸೋರಿಕೆ ಉಂಟಾಗಿ 200ಕ್ಕೂ ಅಧಿಕ ಮಹಿಳಾ ಕಾರ್ಮಿಕರು ಅಸ್ವಸ್ಥರಾಗಿದ್ದರು. ಕಾರ್ಖಾನೆ ಸಮೀಪದ ಪೋರಸ್ ಲ್ಯಾಬೋರೇಟರಿ ಘಟಕದಿಂದ ಅಮೋನಿಯಾ ಅನಿಲ ಸೋರಿಕೆಯಾಗಿ ಸಮಸ್ಯೆಯಾಗಿತ್ತು ಎಂದು ಹೇಳಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.