ನವದೆಹಲಿ: ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಶುಕ್ರವಾರ ಬಿಜೆಪಿ ಸೇರಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ನನ್ನ ಮೇಲೆ ಪ್ರಭಾವ ಬೀರಿದೆ.ನಾನು ಕ್ರಿಕೆಟ್ ಕ್ಷೇತ್ರದಲ್ಲಿ ಕೊಡುಗೆ ನೀಡಿದ್ದೇನೆ. ಈಗ ನಾನು ದೇಶಕ್ಕಾಗಿ ಮತ್ತಷ್ಟು ಕಾರ್ಯಗಳನ್ನು ಮಾಡಲು ಬಯಸುತ್ತೇನೆ ಎಂದು ಗಂಭೀರ್ ಹೇಳಿದ್ದಾರೆ.
ಗಂಭೀರ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ವಿತ್ತ ಸಚಿವ ಅರುಣ್ ಜೇಟ್ಲಿ, ಗಂಭೀರ್ ಅವರ ವೃತ್ತಿ ಜೀವನ ಉತ್ತಮವಾಗಿತ್ತು. ಅವರು ತಮ್ಮಸಾಮರ್ಥ್ಯವನ್ನು ಪಕ್ಷಕ್ಕೆ ಬಳಸಿಕೊಳ್ಳುತ್ತಾರೆ ಎಂಬನಿರೀಕ್ಷೆ ಇದೆ.ಅವರ ಜಾಣ್ಮೆಪಕ್ಷಕ್ಕೆ ನೆರವಾಗಲಿದೆ ಎಂದಿದ್ದಾರೆ.
ಅಂದಹಾಗೆ ದೆಹಲಿ ಲೋಕಸಭಾ ಕ್ಷೇತ್ರದಲ್ಲಿ ಗಂಭೀರ್ ಸ್ಪರ್ಧಿಸುತ್ತಾರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಜೇಟ್ಲಿ, ಈ ಬಗ್ಗೆ ಪಕ್ಷದ ಚುನಾವಣಾ ಸಮಿತಿ ನಿರ್ಧರಿಸುತ್ತದೆ ಎಂದಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ 90 ಲಕ್ಷದಷ್ಟು ಫಾಲೋವರ್‌ಗಳನ್ನು ಹೊಂದಿರುವ ಗಂಭೀರ್, ಸಾಮಾಜಿಕ ಹಾಗೂ ರಕ್ಷಣಾ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಕ್ರಿಯಿಸುತ್ತಾ ಸಕ್ರಿಯರಾಗಿದ್ದುದರಿಂದ ಅವರು ರಾಜಕೀಯ ಪ್ರವೇಶಿಸುತ್ತಾರೆ ಎಂಬ ಸುದ್ದಿ ಈ ಹಿಂದೆಯೇ ಹಬ್ಬಿತ್ತು. ಆಗ ಈ ಸುದ್ದಿಯನ್ನು ಅಲ್ಲಗೆಳೆದಿದ್ದ ಗಂಭೀರ್ನಾನು ಕುಟುಂಬದ ಬಗ್ಗೆ ಯೋಚಿಸಬೇಕಿದೆ.ನಾನು ಅವರೊಂದಿಗೆ ಕಳೆದ ಕ್ಷಣಗಳು ಕಡಿಮೆಯೇ, ಹಾಗಾಗಿ ಅವರಿಗೆ ಸಮಯ ಕೊಡಬೇಕಿದೆಎಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.