ADVERTISEMENT

ಎಲ್ಗಾರ್‌ ಪರಿಷತ್–ಮಾವೋವಾದಿ ಸಂಪರ್ಕ ಪ್ರಕರಣ: ನವಲಖಾ ಜಾಮೀನು ಅರ್ಜಿ ತಿರಸ್ಕೃತ

ಪಿಟಿಐ
Published 6 ಏಪ್ರಿಲ್ 2023, 14:11 IST
Last Updated 6 ಏಪ್ರಿಲ್ 2023, 14:11 IST
ಗೌತಮ್‌ ನವಲಖಾ
ಗೌತಮ್‌ ನವಲಖಾ   

ಮುಂಬೈ: ಎಲ್ಗಾರ್‌ ಪರಿಷತ್‌–ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಬಂಧನದಲ್ಲಿರುವ ಸಾಮಾಜಿಕ ಕಾರ್ಯಕರ್ತ ಗೌತಮ್‌ ನವಲಖಾ ಅವರ ಜಾಮೀನು ಅರ್ಜಿಯನ್ನು ಇಲ್ಲಿನ ಎನ್‌ಐಎ ವಿಶೇಷ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ.

ನವಲಖಾ ಅವರ ಜಾಮೀನು ಅರ್ಜಿ ಸಂಬಂಧ ಕಳೆದ ತಿಂಗಳು ವಿಶೇಷ ನ್ಯಾಯಾಧೀಶರು ನೀಡಿದ್ದ ಆದೇಶವನ್ನು ಬಾಂಬೆ ಹೈಕೋರ್ಟ್‌ ರದ್ದು ಮಾಡಿತ್ತು. ಜೊತೆಗೆ ನವಲಖಾ ಅವರ ಅರ್ಜಿಯನ್ನು ಮತ್ತೊಮ್ಮೆ ಆಲಿಸುವಂತೆ ವಿಶೇಷ ನ್ಯಾಯಾಲಯಕ್ಕೆ ಸೂಚಿಸಿತ್ತು. ‘ವಿಶೇಷ ನ್ಯಾಯಾಲಯ ನೀಡಿದ ಆದೇಶದಲ್ಲಿ ಸಾಕ್ಷ್ಯಗಳ ಕುರಿತ ವಿಶ್ಲೇಷಣೆ ಸಮರ್ಪಕವಾಗಿಲ್ಲ’ ಎಂದೂ ಹೈಕೋರ್ಟ್‌ ಹೇಳಿತ್ತು.

ಇದರಂತೆ ವಿಶೇಷ ನ್ಯಾಯಾಧೀಶ ರಾಜೇಶ್‌ ಕಠಾರಿಯಾ ಅವರು ಅರ್ಜಿಯ ವಿಚಾರಣೆ ನಡೆಸಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.‌

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.