ADVERTISEMENT

29ನೇ ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಜನರಲ್‌ ಮನೋಜ್‌ ಪಾಂಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಏಪ್ರಿಲ್ 2022, 10:08 IST
Last Updated 30 ಏಪ್ರಿಲ್ 2022, 10:08 IST
ಜನರಲ್‌ ಮನೋಜ್ ಪಾಂಡೆ ಅವರಿಗೆ ಅಧಿಕಾರ ಹಸ್ತಾಂತರಿಸುತ್ತಿರುವ ಜನರಲ್‌ ಎಂ.ಎಂ.ನರವಣೆ
ಜನರಲ್‌ ಮನೋಜ್ ಪಾಂಡೆ ಅವರಿಗೆ ಅಧಿಕಾರ ಹಸ್ತಾಂತರಿಸುತ್ತಿರುವ ಜನರಲ್‌ ಎಂ.ಎಂ.ನರವಣೆ    

ನವದೆಹಲಿ: 29ನೇ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರು ಶನಿವಾರ ಅಧಿಕಾರ ವಹಿಸಿಕೊಂಡರು.

ಈ ಹಿಂದೆ ಸೇನಾ ಮುಖ್ಯಸ್ಥರಾಗಿದ್ದ ಜನರಲ್‌ ಎಂ.ಎಂ.ನರವಣೆ ಅವರು ಮೂರೂ ಸೇನಾಪಡೆಗಳ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಆ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥರಾಗಿ ಮನೋಜ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ.

ಉಪ ಸೇನಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದ ಜನರಲ್ ಪಾಂಡೆ, 'ಕಾರ್ಪ್ಸ್ ಆಫ್ ಇಂಜಿನಿಯರ್ಸ್‌'ನ ಮೊದಲ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ADVERTISEMENT

ಜನರಲ್‌ ಪಾಂಡೆ ಅವರು ಅಂಡಮಾನ್ ಮತ್ತು ನಿಕೋಬಾರ್‌ನ ಕಮಾಂಡರ್-ಇನ್-ಚೀಫ್ ಆಗಿ ಸೇವೆ ಸಲ್ಲಿಸಿದ್ದಾರೆ.

ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆಯ ವಿದ್ಯಾರ್ಥಿಯಾಗಿರುವ ಅವರು ಡಿಸೆಂಬರ್ 1982 ರಲ್ಲಿ ಕಾರ್ಪ್ಸ್ ಆಫ್ ಇಂಜಿನಿಯರ್ಸ್‌ಗೆ (ದಿ ಬಾಂಬೆ ಸ್ಯಾಪರ್ಸ್) ನೇಮಕಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.