ನವದೆಹಲಿ: ಮಂಗಳವಾರ ನಿಧನರಾದ ಹಿರಿಯ ಸಮಾಜವಾದಿ ಹಾಗೂ ರಕ್ಷಣಾ ಖಾತೆ ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ಅವರ ಅಂತ್ಯಕ್ರಿಯೆ ದೆಹಲಿಯ ಲೋಧಿ ರಸ್ತೆಯಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.
ಗುರುವಾರ ಬೆಳಿಗ್ಗೆ 11 ಗಂಟೆಗೆ ಅವರ ‘ಪಂಚಶೀಲ’ ನಿವಾಸದಲ್ಲಿ ಪ್ರಾರ್ಥನೆ ನಡೆಯಲಿದೆ. ರಕ್ಷಣಾ ಸಚಿವರಾಗಿ ಸೇವೆ ಸಲ್ಲಿಸಿದ್ದರಿಂದ ಸೇನಾ ವಾಹನದ ಮೂಲಕ ಚಿತಾಗಾರದವರೆಗೆ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ ಎಂದು ಅವರ ಪತ್ನಿ ಲೈಲಾ ಕಬೀರ್ ನಿಕಟವರ್ತಿಗಳು ತಿಳಿಸಿದ್ದಾರೆ.
ಜಾರ್ಜ್ ಅವರ ಚಿತಾಭಸ್ಮವನ್ನು ಪೃಥ್ವೀರಾಜ್ ರಸ್ತೆಯ ಕ್ರೈಸ್ತ ಸ್ಮಶಾನದಲ್ಲಿ ಫೆ. 1ರಂದು ಸಮಾಧಿ ಮಾಡಲಾಗುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.