ಜಮ್ಮು: ಹಿರಿಯ ರಾಜಕಾರಣಿ ಗುಲಾಮ್ ನಬಿ ಆಜಾದ್ ಅವರು ಹೊಸದಾಗಿ ಸ್ಥಾಪಿಸಿರುವ ಡೆಮಾಕ್ರಟಿಕ್ ಆಜಾದ್ ಪಕ್ಷದ (ಡಿಎಪಿ) ಅಧ್ಯಕ್ಷರಾಗಿ ಆಜಾದ್ ಅವರೇ ಚುನಾಯಿತರಾದರು ಎಂದು ಪಕ್ಷದ ಮುಖಂಡರೊಬ್ಬರು ಶನಿವಾರ ತಿಳಿಸಿದರು.
ಪಕ್ಷದ ಸಂಸ್ಥಾಪಕ ಮಂಡಳಿ ಸಭೆಯಲ್ಲಿ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದ ಗೊತ್ತುವಳಿಯನ್ನು ಹೊರಡಿಸಲಾಗಿತ್ತು. ಆಜಾದ್ ಅವರುಅವಿರೋಧವಾಗಿ ಆಯ್ಕೆಯಾದರು ಎಂದು ಅವರು ತಿಳಿಸಿದರು.
ಕಾಂಗ್ರೆಸ್ ತೊರೆದಿದ್ದ ಆಜಾದ್ ಅವರು ತಮ್ಮ ಬೆಂಬಲಿಗರ ಜೊತೆ ಸೇರಿ ಸೆಪ್ಟೆಂಬರ್ 26ರಂದು ಹೊಸ ಪಕ್ಷವನ್ನು ಸ್ಥಾಪಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.