ಮುಂಬೈ: ದಾದರ್ ಪೊಲೀಸ್ ಠಾಣೆಯ ಆವರಣದಲ್ಲಿರುವ ಸೈತಾನ್ ಚೌಕಿ ಪೊಲೀಸ್ ನಿವಾಸ ಸ್ಥಳದಲ್ಲಿ ಬೆಂಕಿ ಅವಘಡ ಸಂಭವಿಸಿ 15ರ ಹರೆಯದ ಬಾಲಕಿಯೊಬ್ಬಳು ಸಾವಿಗೀಡಾದ ಘಟನೆ ನಡೆದಿದೆ.
ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಅಗ್ನಿಶಾಮಕ ದಳದ 4 ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿವೆ.
5 ಮಹಡಿಯ ಕಟ್ಟಡದ ಮೂರನೇ ಮಹಡಿಯಲ್ಲಿ ಭಾನುವಾರ ಮಧ್ಯಾಹ್ನ 1.45ಕ್ಕೆ ಬೆಂಕಿ ಕಾಣಿಸಿಕೊಂಡಿಸಿತ್ತು.ಈ ಬೆಂಕಿಗೆ ವಿದ್ಯುತ್ ಉಪಕರಣ, ಗೃಹೋಪಕರಣಗಳು ಸುಟ್ಟು ಬೂದಿಯಾಗಿವೆ.
ಅಗ್ನಿ ಅವಘಡ ಸಂಭವಿಸಲು ಕಾರಣ ಏನೆಂದು ಇದುವರೆಗೆ ತಿಳಿದು ಬಂದಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.