ಬೆಂಗಳೂರು: ಪಂಚರಾಜ್ಯ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿದ್ದು, ಅಭ್ಯರ್ಥಿಗಳ ಆಯ್ಕೆ ಮತ್ತು ಪಟ್ಟಿ ಬಿಡುಗಡೆ ಮುಂತಾದ ಕೆಲಸಗಳು ಭರದಿಂದ ಸಾಗಿವೆ.
ಗೋವಾ ಮತ್ತು ಉತ್ತರಾಖಂಡ ಚುನಾವಣೆಗೆ ಬಿಜೆಪಿ, ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುತ್ತಿದೆ.
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು ಚುನಾವಣೆ ಸಂಬಂಧ ದೆಹಲಿಗೆ ತೆರಳಿ ಪಕ್ಷದ ಉನ್ನತ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ಹೇಳಿವೆ.
40 ಮಂದಿ ಸದಸ್ಯಬಲದ ಗೋವಾ ವಿಧಾನಸಭೆ ಮತ್ತು 70 ಮಂದಿ ಸದಸ್ಯಬಲದ ಉತ್ತರಾಖಂಡ ವಿಧಾನಸಭೆಗೆ ಫೆಬ್ರುವರಿ 14ರಂದು ಮತದಾನ ನಡೆಯಲಿದೆ. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.
ಬಿಜೆಪಿಯಿಂದ ಸ್ಪರ್ಧಿಸಲಿರುವ ಸಂಭಾವ್ಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಸಂಬಂಧಿಸಿ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ಪಕ್ಷದ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ನಂತರದಲ್ಲಿ ಅಭ್ಯರ್ಥಿ ಪಟ್ಟಿ ಅಂತಿಮವಾಗಲಿದೆ ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.