ಪಣಜಿ: ಕರಾವಳಿ ರಾಜ್ಯ ಗೋವಾದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿಂ) ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನಲೆ ಗೋವಾ ಶಿಕ್ಷಣ ಇಲಾಖೆಯು 12ನೇ 2ನೇ ತರಗತಿವರೆಗಿನ ಶಾಲೆಗಳಿಗೆ ರಜೆ ಘೋಷಿಸಿದೆ.
ಕಳೆದ ಮೂರು ದಿನಗಳಿಂದ ಗೋವಾದಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಇಂದು (ಸೋಮವಾರ) ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.
ಐಎಂಡಿ ರಾಜ್ಯದಲ್ಲಿ ಸೋಮವಾರ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಹೀಗಾಗಿ ರಾಜ್ಯದಲ್ಲಿ 1ರಿಂದ 12ನೇ 2ನೇ ತರಗತಿವರೆಗಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ರಾಜ್ಯ ಶಿಕ್ಷಣ ನಿರ್ದೇಶಕ ಶೈಲೇಶ್ ಝಿಂಗ್ಡೆ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ ಎಂದು ಶೈಲೇಶ್ ಹೇಳಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಉತ್ತರ ಗೋವಾದ ಪೆರ್ನೆಮ್‌ನಲ್ಲಿ 210 ಮಿ. ಮೀ ಮಳೆಯಾಗಿದ್ದು, ಮಳೆ ಪ್ರಮಾಣ ಹೆಚ್ಚಾಗಿದೆ ಎಂದು ಐಎಂಡಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.