ಪಣಜಿ: ಟೂಲ್‌ಕಿಟ್ ಪ್ರಕರಣದ ಆರೋಪಿಗಳಾದ ನಿಕಿತಾ ಜೇಕಬ್ ಮತ್ತು ಶಾಂತನು ಅವರ ಪರಿಚಿತರಾದ ಗೋವಾದ ಪರಿಸರ ಕಾರ್ಯಕರ್ತ ಶುಭಂಕರ್ ಚೌಧರಿ ಅವರು ನಿರೀಕ್ಷಣಾ ಜಾಮೀನು ಕೋರಿದ್ದಾರೆ.
ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ತಮ್ಮನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಿ, ಬಂಧಿಸುವ ಸಾಧ್ಯತೆಯಿದೆ ಎಂಬ ಕಾರಣಕ್ಕೆ ಬಾಂಬೆ ಹೈಕೋರ್ಟ್‌ನ ಗೋವಾ ಪೀಠಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಎಫ್‌ಐಆರ್‌ನಲ್ಲಿ ಚೌಧರಿ ಅವರ ಹೆಸರಿಲ್ಲದಿದ್ದರೂ, ಅರ್ಜಿದಾರರನ್ನು ಪ್ರಕರಣದಲ್ಲಿ ಸೇರಿಸುವ ಸಾಧ್ಯತೆಯಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಈಗಾಗಲೇ ದೆಹಲಿ ಪೊಲೀಸರಿಗೆ ನೋಟಿಸ್ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.