ನವದೆಹಲಿ: 2022ರ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಹಲವು ಮಂದಿ ಅಪರಾಧಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ನಡೆಯಲಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ. ಪಾರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠವು ಈ ಅರ್ಜಿಗಳ ವಿಚಾರಣೆ ನಡೆಸಲಿದೆ.
ಮುಂದಿನ ವಿಚಾರಣೆಯಲ್ಲಿ ಅಪರಾಧಿಗಳ ಜಾಮೀನು ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಮಾರ್ಚ್ 24ರಂದು ಸುಪ್ರೀಂ ಕೋರ್ಟ್ ಹೇಳಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.