ADVERTISEMENT

ಸ್ವರ್ಣ ಮಂದಿರದಲ್ಲಿ ವ್ಯಕ್ತಿಯ ಹತ್ಯೆ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದ ಪಂಜಾಬ್

ಡೆಕ್ಕನ್ ಹೆರಾಲ್ಡ್
Published 19 ಡಿಸೆಂಬರ್ 2021, 11:14 IST
Last Updated 19 ಡಿಸೆಂಬರ್ 2021, 11:14 IST
ಸ್ವರ್ಣ ಮಂದಿರದ ಆವರಣದಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್ – ಎಎಫ್‌ಪಿ ಚಿತ್ರ
ಸ್ವರ್ಣ ಮಂದಿರದ ಆವರಣದಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್ – ಎಎಫ್‌ಪಿ ಚಿತ್ರ   

ಚಂಡೀಗಡ: ಅಮೃತಸರದ ಸ್ವರ್ಣ ಮಂದಿರ ಅಪವಿತ್ರಗೊಳಿಸಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ ಪ್ರಕರಣದ ತನಿಖೆಗೆ ಪಂಜಾಬ್ ಸರ್ಕಾರವು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿದೆ.

ತನಿಖೆ ನಡೆಸಿ ವರದಿ ಸಲ್ಲಿಸಲು ಕಾನೂನು ಹಾಗೂ ಸುವ್ಯವಸ್ಥೆ ವಿಭಾಗದ ಡಿಸಿಪಿ ನೇತೃತ್ವದ ಎಸ್‌ಐಟಿಗೆ ಎರಡು ದಿನಗಳ ಕಾಲಾವಕಾಶ ನೀಡಲಾಗಿದೆ.

ಸ್ವರ್ಣ ಮಂದಿರದಲ್ಲಿ ನಡೆದ ಘಟನೆ ಅತ್ಯಂತ ದುರದೃಷ್ಟಕರ ಎಂದಿರುವ ಪಂಜಾಬ್ ಉಪ ಮುಖ್ಯಮಂತ್ರಿ ಸುಖ್‌ಜಿಂದರ್ ಸಿಂಗ್ ರಾಂಧಾವ, ಎರಡು ದಿನಗಳ ಒಳಗಾಗಿ ಎಸ್‌ಐಟಿ ತನಿಖಾ ವರದಿ ಸಲ್ಲಿಸಲಿದೆ ಎಂದು ಹೇಳಿದ್ದಾರೆ.

ADVERTISEMENT

ಶನಿವಾರ ಸಂಜೆ ವ್ಯಕ್ತಿಯೊಬ್ಬರು ಖಡ್ಗವನ್ನು ಹಿಡಿದುಕೊಂಡು ಪ್ರಾರ್ಥನೆಯ ಸಂದರ್ಭದಲ್ಲಿ ಗರ್ಭಗುಡಿಯೊಳಗೆ ಜಿಗಿದಿದ್ದು, ಗುರು ಗ್ರಂಥ ಸಾಹೀಬ್ ಪಠಿಸುತ್ತಿದ್ದ ಸ್ಥಳದ ಸಮೀಪ ತಲುಪಿದ್ದರು. ಈ ವೇಳೆ ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ (ಎಸ್‌ಜಿಪಿಸಿ) ಕಾರ್ಯಪಡೆಯ ಸಿಬ್ಬಂದಿ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಕೋಪೋದ್ರಿಕ್ತರ ಗುಂಪು ಹಿಗ್ಗಾಮುಗ್ಗ ಥಳಿಸಿದ ಪರಿಣಾಮ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.