ADVERTISEMENT

ರಾಜಸ್ಥಾನದ ಆಲ್ವಾರ್‌ನಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು

ಪಿಟಿಐ
Published 21 ಜುಲೈ 2024, 5:44 IST
Last Updated 21 ಜುಲೈ 2024, 5:44 IST
   

ಜೈಪುರ: ರಾಜಸ್ಥಾನದ ಆಲ್ವಾರ್ ಯಾರ್ಡ್‌ನಲ್ಲಿ ಭಾನುವಾರ ಮುಂಜಾನೆ ಗೂಡ್ಸ್ ರೈಲಿನ ಮೂರು ಬೋಗಿಗಳು ಹಳಿ ತಪ್ಪಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗಿನ ಜಾವ 2.30ಕ್ಕೆ ಘಟನೆ ನಡೆದಿದೆ. ಯಾರ್ಡ್‌ನ ಒಂದು ಬದಿಯಲ್ಲಿ ಘಟನೆ ನಡೆದಿದ್ದು, ಹೀಗಾಗಿ ಸಂಚಾರಕ್ಕೆ ಯಾವುದೇ ತೊಂದರೆಯುಂಟಾಗಿಲ್ಲ ಎಂದು ವಾಯವ್ಯ ರೈಲ್ವೆಯ ಸಿಪಿಆರ್‌ಒ ತಿಳಿಸಿದ್ದಾರೆ.

ಬೆಳಿಗ್ಗೆ 9 ಗಂಟೆಗೆ ಹಳಿಯಲ್ಲಿದ್ದ ಬೋಗಿಗಳನ್ನು ತೆರವುಗೊಳಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ. ‌

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.