ADVERTISEMENT

ಮೋಕ್ಷಗುಂಡಂ ವಿಶ್ವೇಶ್ವರಯ್ಯ 157ನೇ ಜನ್ಮದಿನಕ್ಕೆ ಗೂಗಲ್ ಡೂಡಲ್ ಗೌರವ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2018, 2:15 IST
Last Updated 15 ಸೆಪ್ಟೆಂಬರ್ 2018, 2:15 IST
   

ಬೆಂಗಳೂರು:ಸರ್ ಎಂ.ವಿ ಎಂದೇ ಜನಪ್ರಿಯರಾಗಿದ್ದ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ 157ನೇ ಜನ್ಮದಿನಕ್ಕೆ ಗೂಗಲ್ ಡೂಡಲ್ ಮೂಲಕ ಗೌರವ ಸಲ್ಲಿಸಿದೆ. ಸರ್ ಎಂ.ವಿ ಅವರ ಜನ್ಮದಿನವನ್ನು ಇಂಜಿನಿಯರ್ ದಿನ ಆಗಿ ಆಚರಿಸಲಾಗುತ್ತಿದೆ.

ಮೋಕ್ಷಗುಂಡಂ ವಿಶ್ವೇಶ್ವರಯ್ಯ ಹುಟ್ಟಿದ್ದು ಸೆಪ್ಟೆಂಬರ್ 15, 1861ರಂದು. ಹುಟ್ಟೂರು ಮುದ್ದೇನಹಳ್ಳಿ. ಚಿಕ್ಕಬಳ್ಳಾಪುರದಲ್ಲಿ ಪ್ರಾಥಮಿಕ ಮತ್ತು ಬೆಂಗಳೂರಿನಲ್ಲಿ ಪ್ರೌಢಶಿಕ್ಷಣ ಮುಗಿಸಿದರು. 1881ರಲ್ಲಿ ಮದರಾಸು ವಿಶ್ವವಿದ್ಯಾಲಯದಿಂದ ಪದವಿ ಪಡೆದು ನಂತರ ಪುಣೆಯ ವಿಜ್ಞಾನ ಕಾಲೇಜಿನಲ್ಲಿ ಎಂಜಿನಿಯರಿಂಗ್ ಪದವಿ ಪಡೆದರು.ಮುಂಬೈ ಸರ್ಕಾರದ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಆಗಿ ವೃತ್ತಿ ಜೀವನ ಆರಂಭಿಸಿದರು (೧೮೮೪). ಇದಾದ ಮೇಲೆ ಭಾರತೀಯ ನೀರಾವರಿ ಕಮಿಷನ್ ಸೇರಿದರು. ಆಗ ದಖನ್ ಪ್ರಸ್ಥಭೂಮಿಯಲ್ಲೇ ಉತ್ತಮವಾದ ನೀರಾವರಿ ವ್ಯವಸ್ಥೆ ಮಾಡಿದರು.

1912-1918ರ ಅವಧಿಯಲ್ಲಿ ಮೈಸೂರಿನ ದಿವಾನರಾಗಿ ಸೇವೆ ಸಲ್ಲಿಸಿದ್ದರು. ವಿಶ್ವೇಶ್ವರಯ್ಯನವರು ದಿವಾನರಾಗಿದ್ದಾಗ ಬ್ರಿಟಿಷ್ ಸರ್ಕಾರ ಅವರಿಗೆ "ಸರ್" ಪದವಿಯನ್ನು ನೀಡಿತ್ತು. 1955ರಲ್ಲಿ ಭಾರತ ಸರ್ಕಾರ ದೇಶ ಪರಮೋನ್ನತ ಪ್ರಶಸ್ತಿಯಾದ ಭಾರತ ರತ್ನ ನೀಡಿ ಗೌರವಿಸಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.