ನವದೆಹಲಿ: ಹಿರಿಯ ರಾಜತಾಂತ್ರಿಕ ಅಧಿಕಾರಿ ಗೋಪಾಲ ಬಾಗಲೆ ಅವರನ್ನು ಆಸ್ಟ್ರೇಲಿಯಾದ ಭಾರತ ಹೈಕಮಿಷನರ್ ಆಗಿ ನೇಮಕ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಮನ್‌ಪ್ರೀತ್ ವೋಹ್ರಾ ಅವರಿಂದ ತೆರವಾಗುವ ಸ್ಥಾನಕ್ಕೆ ಬಾಗಲೆ ಅವರನ್ನು ನೇಮಕ ಮಾಡಲಾಗಿದ್ದು, ಶೀಘ್ರದಲ್ಲೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
1992ನೆ ಬ್ಯಾಚಿನ ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್) ಅಧಿಕಾರಿ ಬಾಗಲೆ ಅವರು ಸದ್ಯ ಶ್ರೀಲಂಕಾದಲ್ಲಿ ಭಾರತದ ಹೈಕಮಿಷನರ್ ಆಗಿದ್ದಾರೆ.
ಬಾಗಲೆ ಅವರು ವಿದೇಶಾಂಗ ಇಲಾಖೆಯ ವಕ್ತಾರರಾಗಿ, ಜಂಟಿ ಕಾರ್ಯದರ್ಶಿಯಾಗಿ (ಪಾಕಿಸ್ತಾನ, ಅಘ್ಗಾನಿಸ್ತಾನ, ಇರಾನ್) ಮತ್ತು ಪ್ರಧಾನಮಂತ್ರಿ ಕಾರ್ಯಾಲಯದ ಜಂಟಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.
1966ರಲ್ಲಿ ಜನಿಸಿರುವ ಇವರು ಲಖನೌ ವಿಶ್ವಾವಿದ್ಯಾಲಯದಲ್ಲಿ ರಸಾಯನಶಾಸ್ತ್ರ ವಿಷಯದಲ್ಲಿ ಪದವಿ ಪಡೆದಿದ್ದಾರೆ. ಹಿಂದಿ, ಉರ್ದು, ಸಂಸ್ಕೃತ, ಇಂಗ್ಲಿಷ್, ಉಕ್ರೇನ್, ರಷ್ಯಾ ಮತ್ತು ನೇಪಾಳಿ ಭಾಷೆ ಮಾತನಾಡುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.