ನವದೆಹಲಿ: ಪ್ರವಾಹ ಪೀಡಿತ ಕೇರಳದಲ್ಲಿ ಮನೆ ಕಳೆದುಕೊಂಡಿರುವ ಸಂತ್ರಸ್ತರಿಗಾಗಿ ವಸತಿ ಯೋಜನೆಯಲ್ಲಿನ ನಿಯಮಾವಳಿಗಳನ್ನು ಸಡಿಲಗೊಳಿಸಿರುವಕೇಂದ್ರ ಸರ್ಕಾರ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಎಂಜಿಎನ್‌ಆರ್‌ಇಜಿಎಸ್) ಅಡಿಯಲ್ಲಿ ₹ 543 ಕೋಟಿ ಹಣ ಬಿಡುಗಡೆ ಮಾಡಿದೆ.
ಜನರಿಗೆ ಸಾಮಾಜಿಕ ಭದ್ರತೆ ಒದಗಿಸುವ ಸಲುವಾಗಿ ಹಾಗೂ ವಸತಿ ನಿರ್ಮಿಸಿಕೊಳ್ಳಲು ನೆರವಾಗುವ ಸಲುವಾಗಿ ಎಂಜಿಎನ್‌ಆರ್‌ಇಜಿಎಸ್ ಅಡಿಯಲ್ಲಿ ಹಣ ಬಿಡುಗಡೆ ಮಾಡಲಾಗಿದ್ದು, ನಿರ್ಮಾಣ ಕಾರ್ಯಕ್ಕಾಗಿ ಜನರನ್ನು ನೇಮಿಸುವಂತೆ ಆಡಳಿತಾಧಿಕಾರಿಗಳಿಗೆ ಸೂಚಿಸಿದೆ.
ಹಣ ಬಿಡುಗಡೆ ಜೊತೆಗೆ ಒಟ್ಟು 5.5 ಕೋಟಿ ಮಾನವ ದಿನಗಳ ಕೆಲಸವನ್ನು ಅನುಮೋದಿಸಿರುವ ಕೇಂದ್ರ ಸರ್ಕಾರ ಇದಕ್ಕಾಗಿ ಪ್ರತ್ಯೇಕ ಕಾರ್ಮಿಕ ಬಜೆಟ್ ಮಂಡಿಸುಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಎಂಜಿಎನ್‌ಆರ್‌ಇಜಿಎಸ್ ಅಡಿಯಲ್ಲಿ ಪುನರ್‌ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳಲು ಹೆಚ್ಚುವರಿ ನೆರವು ನೀಡುವಂತೆ ಕೋರಿಕೇರಳ ಸರ್ಕಾರಕೇಂದ್ರಕ್ಕೆ ಪತ್ರ ಬರೆದಿತ್ತು.
ಪ್ರವಾಹ ಸಂದರ್ಭದಲ್ಲಿ 293ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪ್ರವಾಹದಿಂದಾಗಿ ₹ 19,500 ಕೋಟಿ ಆಸ್ತಿ ನಷ್ಟವಾಗಿದೆ ಎಂದು ಕೇರಳ ಕಳೆದವಾರ ಹೇಳಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.