ADVERTISEMENT

ಐದು ವರ್ಷಗಳಲ್ಲಿ 50 ವಿಮಾನ ನಿಲ್ದಾಣಗಳ ಅಭಿವೃದ್ಧಿ: ಸಚಿವ ರಾಮ್‌ಮೋಹನ್‌ ನಾಯ್ಡು

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2024, 11:16 IST
Last Updated 24 ಅಕ್ಟೋಬರ್ 2024, 11:16 IST
ಕೆ. ರಾಮ್‌ಮೋಹನ್‌ ನಾಯ್ಡು –ಪಿಟಿಐ ಚಿತ್ರ
ಕೆ. ರಾಮ್‌ಮೋಹನ್‌ ನಾಯ್ಡು –ಪಿಟಿಐ ಚಿತ್ರ   

ನವದೆಹಲಿ: ‘ದೇಶದಲ್ಲಿ ಮುಂದಿನ ಐದು ವರ್ಷದಲ್ಲಿ ಹೊಸದಾಗಿ 50ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುವುದು’ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮ್‌ಮೋಹನ್‌ ನಾಯ್ಡು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ದೇಶೀಯ ವಿಮಾನಯಾನ ವ್ಯವಸ್ಥೆಯ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಇದರಿಂದ ಹೊಸದಾಗಿ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದರು.

ಮುಂದಿನ 20 ವರ್ಷದಲ್ಲಿ 200ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುವುದು ಎಂದರು.

ADVERTISEMENT

ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ವುಮ್ಲುನ್ಮಾಂಗ್ ವುಲ್ನಮ್ ಮಾತನಾಡಿ, ‘ಪ್ರಸ್ತುತ ದೇಶದಲ್ಲಿ ವಿಮಾನ ಪ್ರಯಾಣಿಕರ ಸಂಖ್ಯೆ 22 ಕೋಟಿ ಇದೆ. ಮುಂದಿನ ಐದು ವರ್ಷದಲ್ಲಿ ಇದು ದ್ವಿಗುಣಗೊಳ್ಳಲಿದೆ’ ಎಂದು ವಿವರಿಸಿದರು.

ಕಳೆದ ಹತ್ತು ವರ್ಷದ ಅವಧಿಯಲ್ಲಿ ವಿಮಾನ ನಿಲ್ದಾಣಗಳ ಸಂಖ್ಯೆ ದ್ವಿಗುಣಗೊಂಡಿದೆ. ದೇಶದಲ್ಲಿ ಒಟ್ಟು 157 ವಿಮಾನ ನಿಲ್ದಾಣಗಳಿವೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.