ನವದೆಹಲಿ: ಭಾರತ್ ಬಯೋಟೆಕ್‌ನ ಉತ್ಪಾದನೆಯಾದ, ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆಯನ್ನು 18 ವರ್ಷ
ಮೇಲ್ಟಟ್ಟವರಿಗೆ ಬೂಸ್ಟರ್ ಡೋಸ್ ಆಗಿ ನೀಡುವುದಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಅನುಮೋದನೆ ನೀಡಿದೆ.
ಈ ಲಸಿಕೆಯನ್ನು, ಮುನ್ನೆಚ್ಚರಿಕೆಯ 3ನೇ ಡೋಸ್ ಆಗಿ ನೀಡುವಂತೆ ಸೂಚಿಸಿದೆ. ರಾಷ್ಟ್ರೀಯ ಲಸಿಕೆ ಕಾರ್ಯಕ್ರಮದ ಮೂಲಕ ಶೀಘ್ರವೇ ಈ ಲಸಿಕೆ ಲಭ್ಯವಾಗುವಂತೆ ಮಾಡಲಾಗುತ್ತದೆ ಎಂದು ಮೂಲಗಳು ಹೇಳಿವೆ. ಈ ಲಸಿಕೆಯು ಸದ್ಯ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯ ಇದೆ. ಚೀನಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವಾಲಯವು, ಮೂಗಿನ ಮೂಲಕ ಹಾಕಬಹುದಾದ ಈ ಲಸಿಕೆ ಬಳಕೆಗೆ ಅನುಮೋದನೆ ನೀಡಿದೆ.
18 ವರ್ಷ ಹಾಗೂ ಮೇಲ್ಪಟ್ಟ ವಯೋಮಾನದವರಿಗೆ ತುರ್ತು ಸಂದರ್ಭದಲ್ಲಿ ನಿರ್ಬಂಧಿತ ಬಳಕೆಗಾಗಿ ಈ ಲಸಿಕೆಗೆ ಭಾರತೀಯ ಔಷಧ ಮಹಾನಿಯಂತ್ರಕರು (ಡಿಸಿಜಿಐ) ಕಳೆದ ನವೆಂಬರ್‌ನಲ್ಲಿ ಅನುಮೋದನೆ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.