ನವದೆಹಲಿ: ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸಿರುವ ‘ನೇಸಲ್’ ಕೋವಿಡ್ ಲಸಿಕೆಯನ್ನು ಬೂಸ್ಟರ್ ಡೋಸ್ ಆಗಿ ಬಳಕೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ.
ಈ ಲಸಿಕೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುತ್ತದೆ. ಇದನ್ನು ಇಂದಿನಿಂದ ಕೋವಿಡ್–19 ಲಸಿಕೆ ಕಾರ್ಯಕ್ರಮದಲ್ಲಿ ಸೇರಿಸಲಾಗುವುದು ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ.
ಕೋವಿಡ್ ನಿಯಂತ್ರಣಕ್ಕಾಗಿ ಮೂಗಿನ ಮೂಲಕ ಬಳಸಬಹುದಾದ ದೇಶದ ಮೊದಲ ಕೋವಿಡ್ ಲಸಿಕೆ ಇದಾಗಿದೆ.
2021ರ ಆಗಸ್ಟ್‌ನಲ್ಲಿ ನೇಸಲ್‌ಲಸಿಕೆಯ 2 ಮತ್ತು 3ನೇ ಕ್ಲಿನಿಕಲ್ ಪ್ರಯೋಗ ನಡೆದಿತ್ತು.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.