ನವದೆಹಲಿ: ದೆಹಲಿ ಹೈಕೋರ್ಟ್ ಮಂಗಳವಾರ ವಿಚಾರಣಾ ನ್ಯಾಯಾಲಯದ ಆದೇಶವನ್ನು ವಜಾಗೊಳಿಸಿ, ಎಎಪಿ ಸಂಸದ ರಾಘವ್ ಛಡ್ಡಾ ಅವರಿಗೆ ಸರ್ಕಾರಿ ಬಂಗಲೆಯಲ್ಲಿ ಇರಲು ಅವಕಾಶ ನೀಡಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನೂಪ್ ಜೈರಾಮ್ ಭಂಭಾನಿ ಅವರು, ‘ಏಪ್ರಿಲ್ 18ರಂದು ವಿಚಾರಣಾ ನ್ಯಾಯಾಲಯವು ಛಡ್ಡಾ ಅವರನ್ನು ಸರ್ಕಾರಿ ನಿವಾಸದಿಂದ ತೆರವುಗೊಳಿಸದಂತೆ ರಾಜ್ಯಸಭಾ ಸಚಿವಾಲಯಕ್ಕೆ ನಿರ್ದೇಶನ ನೀಡಿ ಮಧ್ಯಂತರ ರಕ್ಷಣೆ ನೀಡಿತ್ತು. ವಿಚಾರಣಾ ನ್ಯಾಯಾಲಯ ಅರ್ಜಿಯನ್ನು ಇತ್ಯರ್ಥಪಡಿಸುವವರೆಗೆ ಛಡ್ಡಾ ಅವರು ಆ ಬಂಗಲೆಯಲ್ಲಿ ಇರಬಹುದು’ ಎಂದು ಹೇಳಿದ್ದರು.
ಆದರೆ, ಛಡ್ಡಾ ಅವರು ನಿವಾಸವನ್ನು ತೆರವುಗೊಳಿಸಬೇಕು ಎಂದು ವಿಚಾರಣಾ ನ್ಯಾಯಾಲಯ ಅಕ್ಟೋಬರ್ 5ರಂದು ಮತ್ತೆ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಛಡ್ಡಾ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ವಿಚಾರಣಾ ನ್ಯಾಯಾಲಯದ ನಿರ್ಧಾರ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದನ್ನು ರಾಜ್ಯಸಭಾ ಸಚಿವಾಲಯ ವಿರೋಧಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.