ನವದೆಹಲಿ: 2021–22ನೇ ಮೌಲ್ಯ ಮಾಪನ ವರ್ಷಕ್ಕೆ ಸಂಬಂಧಿಸಿದಂತೆ ವೈಯಕ್ತಿಕ ಆದಾಯ ತೆರಿಗೆ ಲೆಕ್ಕಪತ್ರ ಸಲ್ಲಿಕೆಯ (ಐಟಿಆರ್) ಗಡುವನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿದೆ.
ಕೋವಿಡ್ ಸಾಂಕ್ರಾಮಿಕ ಹಾಗೂ ಐ.ಟಿ. ಜಾಲತಾಣದಲ್ಲಿ ತಾಂತ್ರಿಕ ದೋಷಗಳು ಇರುವ ಕಾರಣಗಳಿಂದಾಗಿ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಈ ಮುಂಚೆ ಸೆಪ್ಟೆಂಬರ್ 30ರ ಗಡುವು ನೀಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.