ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರಬೃಹತ್ ಉದ್ಯೋಗ ಮೇಳಕ್ಕೆ (ರೋಜ್‌ಗಾರ್ ಮೇಳ) ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.
ಇದೇ ವೇಳೆ ಯುವಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಇಂದು ಭಾರತ ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಕಳೆದ 8 ವರ್ಷಗಳಲ್ಲಿ ಕೈಗೊಂಡ ಸುಧಾರಣೆಗಳಿಂದಾಗಿ ಈ ಸಾಧನೆ ಮಾಡಿದ್ದೇವೆ. ನಮ್ಮ ಕರ್ಮಯೋಗಿಗಳ ಶ್ರಮದಿಂದ ಸರ್ಕಾರಿ ಇಲಾಖೆಗಳ ದಕ್ಷತೆ ಹೆಚ್ಚಾಗಿದೆ. ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಬೇಕೆಂಬ ಸಂಕಲ್ಪವನ್ನು ಈಡೇರಿಸಲು ನಾವು ಸ್ವಾವಲಂಬಿ ಭಾರತದ ಹಾದಿಯಲ್ಲಿ ಮುನ್ನಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ.
ಪ್ರಧಾನ ಮಂತ್ರಿ ಮುದ್ರಾ ಯೋಜನೆಯಿಂದ ಶೇ 70ರಷ್ಟು ಮಹಿಳೆಯರು ಫಲಾನುಭವಿಗಳಾಗಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಸರ್ಕಾರದಿಂದ ಆರ್ಥಿಕವಾಗಿ ಬೆಂಬಲಿತವಾಗಿರುವ ಸ್ವ-ಸಹಾಯ ಗುಂಪುಗಳಿಗೆ 8 ಕೋಟಿ ಮಹಿಳೆಯರು ಸೇರ್ಪಡೆಯಾಗಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ.
10 ಲಕ್ಷ ಸಿಬ್ಬಂದಿಯನ್ನು ನೇಮಕಾತಿ ಮಾಡುವ ಅಭಿಯಾನ ಇದಾಗಿದೆ. ಈ ಸಮಾರಂಭದಲ್ಲಿ ಮೊದಲ ಹಂತದಲ್ಲಿ 75 ಸಾವಿರ ನೌಕರರಿಗೆಇಂದು ನೇಮಕಾತಿ ಪತ್ರ ನೀಡಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.