ನವದೆಹಲಿ:ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡುವ ವ್ಯವಸ್ಥೆಯನ್ನು ಬಲಪಡಿಸುವ ಸಾಧ್ಯತೆಗಳ ಬಗ್ಗೆ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸಲಾಗಿದೆ ಎಂದು ಕೇಂದ್ರ ಸರ್ಕಾರವು ರಾಜ್ಯಸಭೆಗೆ ಮಾಹಿತಿ ನೀಡಿದೆ.
‘ಕೃಷಿಯಲ್ಲಿ ವೈವಿಧ್ಯ ತರಲು, ನೈಸರ್ಗಿಕ ಕೃಷಿಯನ್ನು ಉತ್ತೇಜಿಸಲು ಮತ್ತು ಎಂಎಸ್‌ಪಿ ವ್ಯವಸ್ಥೆಯನ್ನು ಬಲಪ
ಡಿಸುವ ಬಗ್ಗೆ ಈ ಸಮಿತಿಯು ಅಧ್ಯಯನ ನಡೆಸಲಿದೆ. ರೈತರ ಪ್ರತಿನಿಧಿಗಳು, ರಾಜ್ಯ ಸರ್ಕಾರದ ಪ್ರತಿನಿಧಿಗಳು ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳೂ ಈ ಸಮಿತಿಯಲ್ಲಿ ಇದ್ದಾರೆ’ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಕೈಲಾಶ್ ಚೌಧರಿ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.