ನವದೆಹಲಿ: ಸಮಸ್ಯೆಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, 'ಸಮಸ್ಯೆಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಿದೆ. ಈ ಕಷ್ಟದ ಪರಿಸ್ಥಿತಿಯಲ್ಲಿ ನಾನು ಎಲ್ಲ ಪಕ್ಷಗಳ ಸಹಕಾರಕ್ಕಾಗಿ ಮನವಿ ಮಾಡುತ್ತೇನೆ. ಭಾರತ-ಚೀನಾ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಮಂಗಳವಾರ ಉಭಯ ಸದನಗಳ ನಾಯಕರ ಸಭೆ ನಡೆಯಲಿದೆ' ಎಂದು ಜೋಶಿ ಮಾಹಿತಿ ನೀಡಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿ ರದ್ದುಗೊಳಿಸಿ ರಾಜ್ಯಸಭಾ ಸಚಿವಾಲಯ ಅಧಿಸೂಚನೆ ಹೊರಡಿಸಿತ್ತು. ಇದರ ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.