ನವದೆಹಲಿ: ಇದೇ 22ರಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಬ್ಯಾಂಕಿಂಗ್ ವಲಯದ ಸುಧಾರಣೆಗಾಗಿ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ 1949ಕ್ಕೆ ತಿದ್ದುಪಡಿ ಸಂಬಂಧ ಮಸೂದೆ ಮಂಡಿಸುವ ಸಾಧ್ಯತೆ ಇದೆ.
ಅಲ್ಲದೆ, ರಾಷ್ಟ್ರೀಕೃತ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸಲು ಸರ್ಕಾರವು, ಬ್ಯಾಂಕಿಂಗ್ ಕಂಪನಿಗಳ ಕಾಯ್ದೆ 1970 ಮತ್ತು 1980ರ ಕಾಯ್ದೆಯನ್ನು (ಸ್ವಾಧೀನ ಮತ್ತು ವರ್ಗಾವಣೆ) ತಿದ್ದುಪಡಿ ಮಸೂದೆ ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈ ಎರಡು ಕಾಯ್ದೆಗಳ ಅಡಿ ಬ್ಯಾಂಕ್‌ಗಳನ್ನು ಎರಡು ಹಂತದಲ್ಲಿ ರಾಷ್ಟ್ರೀಕರಣಗೊಳಿಸಲಾಗಿತ್ತು. ಬ್ಯಾಂಕ್‌ಗಳ ಖಾಸಗೀಕರಣಕ್ಕಾಗಿ ಈ ಎರಡು ಕಾಯ್ದೆಗಳನ್ನು ತಿದ್ದುಪಡಿ ಮಾಡಬೇಕಿದೆ ಎಂದು ಹೇಳಿವೆ.
ತಿದ್ದುಪಡಿಗೆ ಸಂಸತ್ತು ಅನುಮೋದನೆ ನೀಡಿದರೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ಸರ್ಕಾರವು ತನ್ನ ಹೂಡಿಕೆಯನ್ನು ಶೇ 51ಕ್ಕಿಂತಲೂ ತಗ್ಗಿಸಿಕೊಳ್ಳಬಹುದು. ಅಲ್ಲದೆ, ಬ್ಯಾಂಕ್‌ಗಳ ಆಡಳಿತ ಸುಧಾರಣೆ ಜೊತೆಗೆ ಹೂಡಿಕೆದಾರರ ರಕ್ಷಣೆಯನ್ನೂ ಹೆಚ್ಚಿಸಬಹುದು ಎಂದು ಮೂಲಗಳು ಹೇಳಿವೆ.
ಈ ಎರಡೂ ಮಸೂದೆಗಳನ್ನು 2021ರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲೇ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿತ್ತು. ಆದರೆ, ಆಗ ಸಾಧ್ಯವಾಗಿರಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.