ಶ್ರೀನಗರ: ಇದೇ ಮೊದಲ ಬಾರಿಗೆ ಇಲ್ಲಿನ ಲಾಲ್ ಚೌಕ್‌ನಲ್ಲಿರುವ ಐತಿಹಾಸಿಕ ಗಡಿಯಾರ ಗೋಪುರದ ಬಳಿ ಗುರುವಾರ ಅದ್ಧೂರಿಯಾಗಿ ದೀಪಾವಳಿ ಆಚರಿಸಲಾಗಿದೆ.
ನೂರಾರು ಸ್ಥಳೀಯರು ಹಾಗೂ ಪ್ರವಾಸಿಗರು ದೀಪಗಳನ್ನು ಬೆಳಗಿಸಿ ಸಂಭ್ರಮಿಸಿದರು. ಇದೇ ಮೊದಲ ಬಾರಿಗೆ ನಗರದಲ್ಲಿ ಅದ್ಧೂರಿಯಾಗಿ ದೀಪಾವಳಿ ಆಚರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಇಲ್ಲಿಗೆ ಬಂದಿರುವುದಕ್ಕೆ ನನಗೆ ತುಂಬಾ ಖುಷಿಯಾಗುತ್ತಿದೆ. ಇಲ್ಲಿನ ವಾತಾವರಣ ತುಂಬಾ ಚೆನ್ನಾಗಿದೆ. ಇಂತಹ ಹಬ್ಬದ ವಾತಾವರಣವನ್ನು ನಾನು ಎಲ್ಲಿಯೂ ನೋಡಿಲ್ಲ' ಎಂದು ರಾಜ್‌ಕೋಟ್‌ನ ಪ್ರವಾಸಿ ರಶ್ಮಿ ಹೇಳಿದ್ದಾರೆ.
'ನಮ್ಮನ್ನು ಬೆಂಬಲಿಸಿದ ಮತ್ತು ನಮ್ಮ ಆಚರಣೆಯಲ್ಲಿ ಪಾಲ್ಗೊಂಡ ಕಾಶ್ಮೀರದ ಜನರಿಗೆ ನಾವು ಕೃತಜ್ಞರಾಗಿರುತ್ತೇವೆ' ಎಂದು ಮತ್ತೊಬ್ಬ ಪ್ರವಾಸಿ ಮನೀಶ್ ಹೇಳಿದ್ದಾರೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಈ ಪ್ರದೇಶದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.