ನವದೆಹಲಿ: ಟೂಲ್‌ಕಿಟ್ ಪ್ರಕರಣದಲ್ಲಿ ಸಿಲುಕಿ ಸದ್ಯ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಪರಿಸರ ಹೋರಾಗಾರ್ತಿ ಬೆಂಗಳೂರಿನ ದಿಶಾ ರವಿ ಅವರಿಗೆ ಅಂತರರಾಷ್ಟ್ರೀಯ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಬೆಂಬಲ ಸೂಚಿಸಿದ್ದಾರೆ.
ದಿಶಾ ಅವರ ಐದು ದಿನಗಳ ಕಸ್ಟಡಿ ಅವಧಿ ಶುಕ್ರವಾರ ಮುಗಿದ ಹಿನ್ನೆಲೆಯಲ್ಲಿ ಅವರಿಗೆ ಮೂರು ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಪಟಿಯಾಲ ಹೌಸ್ ನ್ಯಾಯಾಲಯ ಆದೇಶಿಸಿತು. ಇದೇ ಬೆನ್ನಿಗೇ ಗ್ರೆಟಾ ಥನ್‌ಬರ್ಗ್ ದಿಶಾಗೆ ಬೆಂಬಲ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
'ವಾಕ್ ಸ್ವಾತಂತ್ರ್ಯ, ಶಾಂತಿಯುತ ಪ್ರತಿಭಟನೆ ಮತ್ತು ಸಭೆ ಸೇರುವ ಹಕ್ಕು ಚೌಕಾಸಿ ಇಲ್ಲದ ಮಾನವ ಹಕ್ಕುಗಳಾಗಿವೆ. ಇವು ಯಾವುದೇ ಪ್ರಜಾಪ್ರಭುತ್ವದ ಮೂಲಭೂತ ಅಂಶವಾಗಿರಬೇಕು,' ಎಂದು ಗ್ರೆಟಾ ಪ್ರತಿಪಾದಿಸಿದ್ದಾರೆ. ಅಲ್ಲದೆ, ಈ ಟ್ವೀಟ್ ನೊಂದಿಗೆ ಗ್ರೆಟಾ ಅವರು #StandWithDishaRavi ಎಂಬ ಹ್ಯಾಷ್ ಟ್ಯಾಗ್ ಅನ್ನೂ ಬಳಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.