ADVERTISEMENT

ಗಿರ್ ಅರಣ್ಯದ ಏಕೈಕ ಮತದಾರನಿಗಾಗಿ ಮತಗಟ್ಟೆ ತೆರೆಯಲಾಗುವುದು: ಚುನಾವಣಾ ಆಯೋಗ

ಪಿಟಿಐ
Published 3 ನವೆಂಬರ್ 2022, 7:53 IST
Last Updated 3 ನವೆಂಬರ್ 2022, 7:53 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಗಿರ್‌ ಅರಣ್ಯ ಪ್ರದೇಶದಲ್ಲಿರುವ ಏಕೈಕ ಮತದಾರನಿಗಾಗಿ ಮತಗಟ್ಟೆ ತೆರೆಯಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಗುರುವಾರ ತಿಳಿಸಿದೆ.

ಈ ಬಗ್ಗೆ ಮಾತನಾಡಿರುವಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌,'ಇದು ಚುನಾವಣಾ ಆಯೋಗದ ಸಾಮರ್ಥ್ಯ'ಎಂದಿದ್ದಾರೆ.

ಗುಜರಾತ್‌ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಇಂದು ದಿನಾಂಕ ಪ್ರಕಟಿಸಿದೆ.

ADVERTISEMENT

182 ಸದಸ್ಯ ಬಲದ ವಿಧಾನಸಭೆಗೆ ಡಿಸೆಂಬರ್ 1 ಮತ್ತು ಡಿಸೆಂಬರ್ 5ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.ಡಿಸೆಂಬರ್ 8ರಂದು ಮತ ಎಣಿಕೆ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.