ADVERTISEMENT

ಗುಜರಾತ್: ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ, ಹಳೆಯ ಪಿಂಚಣಿ ಮತ್ತೆ ಜಾರಿಗೆ –ರಾಹುಲ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಸೆಪ್ಟೆಂಬರ್ 2022, 16:16 IST
Last Updated 21 ಸೆಪ್ಟೆಂಬರ್ 2022, 16:16 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ನವದೆಹಲಿ: ಹಳೆಯ ಪಿಂಚಣಿ ರದ್ದತಿಯ ಮೂಲಕ ಬಿಜೆಪಿ ವಯೋವೃದ್ಧರನ್ನುಅವಲಂಬಿತರನ್ನಾಗಿಸಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಹಳೆಯ ಪಿಂಚಣಿ ರದ್ದತಿ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಅವರು, ‘ದೇಶವನ್ನು ಬಲಪಡಿಸುವ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಪಡೆಯುವ ಹಕ್ಕಿದೆ’ ಎಂದು ಹೇಳಿದ್ದಾರೆ.

‘ನಾವು ರಾಜಸ್ಥಾನ, ಛತ್ತೀಸಗಢದಲ್ಲಿ ಹಳೆಯ ಪಿಂಚಣಿಯನ್ನು ಮತ್ತೆ ಜಾರಿಗೆ ಮಾಡಿದ್ದೇವೆ. ಈಗ ಗುಜರಾತಿನಲ್ಲೂ ಕಾಂಗ್ರೆಸ್ ಸರ್ಕಾರ ಬರಲಿದ್ದು, ಹಳೆಯ ಪಿಂಚಣಿ ಜಾರಿಗೆ ತರಲಿದ್ದೇವೆ’ ಎಂದು ರಾಹುಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ADVERTISEMENT

ರಾಹುಲ್ ಗಾಂಧಿ ಅವರು ಸದ್ಯ ‘ಭಾರತ್ ಜೋಡೋ (ಭಾರತ ಒಗ್ಗೂಡಿಸಿ)’ ಯಾತ್ರೆಯಲ್ಲಿ ಬ್ಯುಸಿಯಾಗಿದ್ದಾರೆ.

ಇತ್ತ ಎಐಸಿಸಿ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಶಶಿ ತರೂರ್ ಅವರ ಸ್ಪರ್ಧೆಗೆ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ಹಸಿರು ನಿಶಾನೆ ತೋರಿಸಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಅವರು ಸಹ ಆಕಾಂಕ್ಷಿಯಾಗಿದ್ದು, ಚುನಾವಣಾ ಕಣ ರಂಗೇರುವ ನಿರೀಕ್ಷೆ ಇದೆ.

ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಸೆ.24ರಿಂದ 30ರವರೆಗೆ ನಡೆಯಲಿದೆ. ಅಕ್ಟೋಬರ್ 1ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅ.8ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದಲ್ಲಿ ಅ.17 ರಂದು ಚುನಾವಣೆ ನಡೆಯಲಿದೆ. ಅ.19 ರಂದು ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಘೋಷಣೆಯಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.