ಅಹಮದಾಬಾದ್: ಭಾರತದ ರಹಸ್ಯ ಮತ್ತು ಸೂಕ್ಷ್ಮ ಮಾಹಿತಿಗಳನ್ನು ಪಾಕಿಸ್ತಾನದ ಗೂಢಚಾರಿಗೆ ರವಾನಿಸುತ್ತಿದ್ದ ಆರೋಪದಲ್ಲಿ ಕಛ್ ಜಿಲ್ಲೆಯಲ್ಲಿ ನಿಲೇಶ್ ವಲ್ಜಿಭಾಯಿ ಬಲಿಯಾ ಎಂಬಾತನನ್ನು ಗುಜರಾತ್‌ನ ಭಯೋತ್ಪಾದಕ ನಿಗ್ರಹ ದಳವು (ಎಟಿಎಸ್) ಶನಿವಾರ ಬಂಧಿಸಿದೆ.
ಭುಜ್ ನಗರದಲ್ಲಿರುವ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಬೆಟಾಲಿಯನ್‌ನ ಕೇಂದ್ರ ಲೋಕೋಪಯೋಗಿ ಇಲಾಖೆಯಲ್ಲಿ (ಸಿಪಿಡಬ್ಲ್ಯುಡಿ) ಈತ ಕಚೇರಿ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಣಕ್ಕಾಗಿ ನಿಲೇಶ್ ಪಾಕಿಸ್ತಾನದ ಮಹಿಳಾ ಏಜೆಂಟ್‌ಗೆ ವಾಟ್ಸ್‌ಆ್ಯಪ್ ಮೂಲಕ ಮಾಹಿತಿ ರವಾನಿಸುತ್ತಿದ್ದ ಎಂದು ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.