ಅಹಮದಾಬಾದ್: ಕಳ್ಳಸಾಗಾಣಿಕೆ ಮತ್ತು ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದ ಗುಂಪನ್ನು ಭೇದಿಸಿದ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್), ಆರು ಮಂದಿಯನ್ನು ಬಂಧಿಸಿ, ಅವರಿಂದ 15 ಪಿಸ್ತೂಲ್ ಮತ್ತು ಐದು ಸ್ಥಳೀಯವಾಗಿ ತಯಾರಿಸಿರುವ ಗನ್ ಹಾಗೂ 16 ಮದ್ದುಗುಂಡುಗಳನ್ನು ಶನಿವಾರ ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಪ್ರದೇಶದಿಂದ ಕೆಲವರು ಶಸ್ತ್ರಾಸ್ತ್ರಗಳನ್ನು ಕಳ್ಳಸಾಗಾಣೆ ಮಾಡುತ್ತಿದ್ದಾರೆ ಎಂಬ ಸುಳಿವಿನ ಮೇರೆಗೆ ಏಪ್ರಿಲ್ 4ರಂದು ಎಟಿಎಸ್ ತಂಡವು ಬಸ್‌ನಿಲ್ದಾಣದಲ್ಲಿ ಇಬ್ಬರನ್ನು ಬಂಧಿಸಿ ನಾಲ್ಕು ಪಿಸ್ತೂಲು ಮತ್ತು ನಾಲ್ಕು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ತನಿಖೆಯಲ್ಲಿ ಈ ಚಟುವಟಿಕೆಯಲ್ಲಿ ಇನ್ನೂ ನಾಲ್ವರು ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು, ಶೋಧ ಕಾರ್ಯ ಮುಂದುವರೆದಿದೆ. ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಬಂಧಿಸಿರುವ ಆರೋಪಿಗಳು ಸುರೇಂದ್ರ ನಗರ ಮತ್ತು ರಾಜ್‌ಕೋಟ್ ಜಿಲ್ಲೆಯವರು ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.