ಅಹಮದಾಬಾದ್: ತಮಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಶನಿವಾರ ಮಾಹಿತಿ ನೀಡಿದ್ದಾರೆ.
ಆರೋಗ್ಯ ಖಾತೆಯನ್ನೂ ಹೊಂದಿರುವ 64 ವರ್ಷದ ಪಟೇಲ್ ಅವರು, ಕೋವಿಡ್-19 ದೃಢಪಟ್ಟ ನಂತರ ಯು.ಎನ್. ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಅಂಡ್ ರಿಸರ್ಚ್ ಸೆಂಟರ್‌ಗೆದಾಖಲಾಗಿದ್ದಾರೆ.
ಕೊರೊನಾ ವೈರಸ್‌ನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡ ನಂತರ ನಾನು ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿಕೊಂಡಿದ್ದು, ವರದಿ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದೇನೆ' ಎಂದು ಪಟೇಲ್ ಅವರು ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ನಿತಿನ್ ಪಟೇಲ್ ಅವರು ಮನವಿ ಮಾಡಿದ್ದಾರೆ.
ಹಿಂದಿನ ದಿನ ಅವರು ಗಾಂಧಿನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು, ಇದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿ ವಿಜಯ್ ರೂಪಾನಿ ಭಾಗವಹಿಸಿದ್ದರು. ಅವರು ಶುಕ್ರವಾರ ಶಾ ಮತ್ತು ರೂಪಾನಿ ಅವರೊಂದಿಗೆ ಇದ್ದರು.
ಪಟೇಲ್ ಅವರು ಒಂದು ತಿಂಗಳ ಹಿಂದೆ ತಮ್ಮ ಮೊದಲ ಕೋವಿಡ್ -19 ಲಸಿಕೆ ಡೋಸ್ ಅನ್ನು ಪಡೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.