ಅಹಮದಾಬಾದ್: ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಗುಜರಾತ್ ಸರ್ಕಾರ ರಾಜ್ಯದ ಇನ್ನೂ ಒಂಬತ್ತು ನಗರಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿದೆ.
ಈ ಮೂಲಕ ಗುಜರಾತ್‌ನ 29 ನಗರಗಳಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಿದಂತಾಗಿದೆ. ಮೇ 5ರವರೆಗೆ ರಾತ್ರಿ 8 ರಿಂದ ಬೆಳಿಗ್ಗೆ 6ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ.
ಇಷ್ಟೂ ನಗರಗಳಲ್ಲಿ ರಾತ್ರಿ ಕರ್ಫ್ಯೂ ಜತೆಗೆ, ರೆಸ್ಟೊರೆಂಟ್‌ಗಳು, ಈಜುಕೊಳಗಳು, ಸಿನಿಮಾ ಥಿಯೇಟರ್, ಶಾಪಿಂಗ್ ಕಾಂಪ್ಲೆಕ್ಸ್‌ಗಳು ಮತ್ತು ವಾಟರ್ ಪಾರ್ಕ್‌ಗಳನ್ನು ಬಂದ್ ಮಾಡುವುದು ಸೇರಿದಂತೆ ಹೊಸ ನಿರ್ಬಂಧಗಳನ್ನು ಜಾರಿಗೊಳಿಸಿದೆ. ಎಪಿಎಂಸಿ, ಸಾರ್ವಜನಿಕ ಸಾರಿಗೆ, ಧಾರ್ಮಿಕ ಕಾರ್ಯಕ್ರಮಗಳು, ವಿವಾಹ ಕಾರ್ಯಕ್ರಮಗಳ ಮೇಲೆ ನಿರ್ಬಂಧ ಹೇರಿದೆ.
ಅಹಮದಾಬಾದ್, ಸೂರತ್, ರಾಜಕೋಟ್ ಮತ್ತು ವಡೋದರ ಸೇರಿದಂತೆ 20 ನಗರಗಳಲ್ಲಿ ಈಗಾಗಲೇ ಏಪ್ರಿಲ್ 7ರಿಂದ ರಾತ್ರಿ ಕರ್ಫ್ಯೂಜಾರಿಯಲ್ಲಿದೆ. ಸರ್ಕಾರ ಮತ್ತೆ 9 ನಗರಗಳಲ್ಲಿ ಕರ್ಫ್ಯೂ ವಿಸ್ತರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.