ADVERTISEMENT

ಐಎಸ್‌ಐ ಜತೆ ಸಂಚು: ಗುಜರಾತ್‌ ವ್ಯಕ್ತಿಗೆ ಶಿಕ್ಷೆ

ಪಿಟಿಐ
Published 23 ಅಕ್ಟೋಬರ್ 2024, 16:13 IST
Last Updated 23 ಅಕ್ಟೋಬರ್ 2024, 16:13 IST
<div class="paragraphs"><p>ಜೈಲು (ಪ್ರಾಧಿನಿಧಿಕ ಚಿತ್ರ)</p></div>

ಜೈಲು (ಪ್ರಾಧಿನಿಧಿಕ ಚಿತ್ರ)

   

– ಐಸ್ಟಾಕ್ ಚಿತ್ರ

ಲಖನೌ: ದೇಶದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಪಾಕಿಸ್ತಾನ ಬೆಂಬಲಿತ ಐಎಸ್‌ಐ ಏಜೆಂಟರೊಂದಿಗೆ ಸಂಚು ರೂಪಿಸಿದ್ದಕ್ಕಾಗಿ ಗುಜರಾತ್‌ನ ವ್ಯಕ್ತಿಗೆ ಇಲ್ಲಿನ ವಿಶೇಷ ನ್ಯಾಯಾಲಯವು ಶಿಕ್ಷೆ ವಿಧಿಸಿದೆ.

ADVERTISEMENT

ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) 2020ರಲ್ಲಿ ದಾಖಲಿಸಿದ್ದ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಎರಡನೇ ಆರೋಪಿ ರಜಕ್‌ ಭಾಯಿ ಕುಂಬಾರ ಎಂದು ಎನ್‌ಐಎ ಬುಧವಾರ ಹೇಳಿದೆ.

ಭಾರತೀಯ ದಂಡ ಸಂಹಿತೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ವಿವಿಧ ನಿಬಂಧನೆಗಳಡಿ ಮಂಗಳವಾರ ಎನ್‌ಐಎ ವಿಶೇಷ ನ್ಯಾಯಾಲಯವು ರಜಕ್‌ಗೆ ಕಠಿಣ ಜೈಲು ಶಿಕ್ಷೆ ವಿಧಿಸಿದ್ದು, ಗರಿಷ್ಠ ಆರು ವರ್ಷ ಶಿಕ್ಷೆ ವಿಧಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಪಾಕಿಸ್ತಾನದ ಐಎಸ್‌ಐ ಏಜೆಂಟರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಿ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ದಾಖಲಿಸಿದ್ದ ಪ್ರಕರಣದಲ್ಲಿ, ಉತ್ತರ ಪ್ರದೇಶದ ಚಾಂದೌಲಿ ಜಿಲ್ಲೆಯ ಆರೋಪಿ ಎಂ.ಡಿ. ರಶೀದ್‌ಗೆ ಎನ್‌ಐಎ ವಿಶೇಷ ನ್ಯಾಯಾಲಯವು ಈ ಹಿಂದೆ ಶಿಕ್ಷೆ ವಿಧಿಸಿತ್ತು.

ರಶೀದ್‌ ಪಾಕಿಸ್ತಾನದ ಏಜೆಂಟರಿಗೆ ಭಾರತದ ಸೂಕ್ಷ್ಮ, ಯುದ್ಧತಂತ್ರದ ಮತ್ತು ಆಯಕಟ್ಟಿನ ಪ್ರಮುಖ ಸ್ಥಳಗಳ ಛಾಯಾಚಿತ್ರಗಳನ್ನು ಒದಗಿಸುವುದರ ಜೊತೆಗೆ ಭಾರತೀಯ ಸೇನೆಯ ಚಲನವಲನಗಳ ಮಾಹಿತಿ ಒದಗಿಸಿರುವುದಾಗಿ ಎಟಿಎಸ್‌ ಆರೋಪಿಸಿತ್ತು. ರಕ್ಷಣಾ ಚಿಹ್ನೆ ಸೇರಿದಂತೆ ಈ ಛಾಯಾಚಿತ್ರಗಳನ್ನು ಅವರ ಮೊಬೈಲ್ ಫೋನ್‌ ಬಳಸಿ ಕ್ಲಿಕ್‌ ಮಾಡಲಾಗಿದೆ ಎಂದು ಎನ್‌ಐಎ ತಿಳಿಸಿದೆ.

ಇದಕ್ಕೆ ಸಂಬಂಧಿಸಿದಂತೆ ನಡೆದಿರುವ ಹಣಕಾಸಿನ ವ್ಯವಹಾರದಲ್ಲಿ ರಶೀದ್‌ಗೆ ಕುಂಬಾರ ಸಹಕಾರ ನೀಡಿದ್ದಾನೆ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.