ಗುಜರಾತ್: ಪ್ರಧಾನಿ ನರೇಂದ್ರ ಮೋದಿಯವರು ಇಂದಿನಿಂದ ಎರಡು ದಿನಗಳ ಕಾಲ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ.
ಸಂಜೆ 5.30ರ ಸುಮಾರಿಗೆ ಮೋದಿ ಅವರು ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮೊಧೇರಾದಲ್ಲಿ ಹಲವು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ‘ಮೊಧೇರಾ’ವನ್ನು ಭಾರತದ ಮೊದಲ ಸೌರಶಕ್ತಿ ಚಾಲಿತ ಗ್ರಾಮ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಲಿದ್ದಾರೆ.
‘ಮೊಧೇರಾ’ ಸೂರ್ಯ ದೇವಾಲಯಕ್ಕೆ ಹೆಸರುವಾಸಿಯಾಗಿದೆ. ಇದು ಭಾರತದ ಮೊದಲ ಸೌರಶಕ್ತಿ ಚಾಲಿತ ಗ್ರಾಮವಾಗಲಿದ್ದು, ನವೀಕರಿಸಬಹುದಾದ ಇಂಧನವನ್ನು ಉತ್ತೇಜಿಸುವ ಮಹತ್ವದ ಹೆಗ್ಗುರುತಾಗಿ ರೂಪುಗೊಂಡಿದೆ.
‘ಹಳ್ಳಿಯ ಮನೆಗಳ ಮೇಲೆ 1000ಕ್ಕೂ ಹೆಚ್ಚು ಸೌರ ಫಲಕಗಳನ್ನು ಅಳವಡಿಸಲಾಗಿದ್ದು, ಹೆಚ್ಚು ವಿದ್ಯುತ್ ಉತ್ಪಾದನೆಯಾಗಲಿದೆ. ಬಳಕೆದಾರರಿಗೆ ಶೂನ್ಯ ವೆಚ್ಚದಲ್ಲಿ ಸೌರ ವಿದ್ಯುತ್ ಒದಗಿಸಲಾಗುವುದು’ ಎಂದು ಗುಜರಾತ್ ಸರ್ಕಾರ ಟ್ವೀಟ್ ಮಾಡಿದೆ.
ದೇಶದಲ್ಲಿ ನವೀಕರಿಸಬಹುದಾದ ಇಂಧನದ ಬಳಕೆಯನ್ನು ಉತ್ತೇಜಿಸುವ ಮೋದಿಯವರ ಉದ್ದೇಶವನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಾದ್ಯಂತ ವಿವಿಧ ಕಲ್ಯಾಣ ಯೋಜನೆಗಳ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸರ್ಕಾರ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.