ADVERTISEMENT

ಗುಜರಾತ್‌ ಶಾಲೆಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ: ದೈಹಿಕ ಶಿಕ್ಷಣ ಶಿಕ್ಷಕನ ಬಂಧನ

ಪಿಟಿಐ
Published 14 ಜುಲೈ 2024, 15:57 IST
Last Updated 14 ಜುಲೈ 2024, 15:57 IST
<div class="paragraphs"><p>ಸಾಂಕೇತಿಕ ಚಿತ್ರ</p></div>

ಸಾಂಕೇತಿಕ ಚಿತ್ರ

   

ಮಹಿಸಾಗರ್ (ಗುಜರಾತ್‌): 16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಮತ್ತು ಬೆದರಿಕೆ ಹಾಕಿರುವ ಆರೋಪದ ಮೇಲೆ ಗುಜರಾತ್‌ನ ಮಹಿಸಾಗರ್‌ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ದೈಹಿಕ ಶಿಕ್ಷಣ ಶಿಕ್ಷಕನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. 

ವೀರಪುರ ತಾಲ್ಲೂಕಿನ ರಂಜಿತ್‌ಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಘಟನೆಯನ್ನು ವಿರೋಧಿಸಿ ಗ್ರಾಮಸ್ಥರು ಆಕ್ರೋಶದಿಂದ ಶನಿವಾರ ಸಂಜೆ ಶಾಲೆಯನ್ನು ಧ್ವಂಸಗೊಳಿಸಲು ಯತ್ನಿಸಿ ಕಟ್ಟಡಕ್ಕೆ ಹಾನಿಯುಂಟು ಮಾಡಿದ್ದಾರೆ ಎಂದು ಉಪ ಪೊಲೀಸ್‌ ವರಿಷ್ಠಾಧಿಕಾರಿ ಕಮಲೇಶ್‌ ವಾಸವ ತಿಳಿಸಿದರು. 

ADVERTISEMENT

‘ಆರೋಪಿ ಶಿಕ್ಷಕ ಬಾಲಕಿಗೆ ಪದೇ ಪದೇ ಕಿರುಕುಳ ನೀಡಿದ್ದು, ತನ್ನೊಂದಿಗೆ ದೈಹಿಕ ಸಂಪರ್ಕ ಬೆಳೆಸುವಂತೆ ಒತ್ತಾಯಿಸಿದ್ದಾನೆ. ಸಾಮಾಜಿಕ ಜಾಲತಾಣದಲ್ಲೂ ಬಾಲಕಿಗೆ ಸಂದೇಶ ಕಳುಹಿಸಿದ್ದಾನೆ. ಬಳಿಕ ಆಕೆ ಈ ಬಗ್ಗೆ ಸಂಬಂಧಿಕರ ಬಳಿ ಹೇಳಿಕೊಂಡಿದ್ದಾಳೆ. ನಂತರ ಅವರು ಶಾಲೆಯ ಮುಖ್ಯ ಶಿಕ್ಷಕರ ಬಳಿ ದೂರಿದ್ದಾರೆ. ವಿಷಯ ತಿಳಿದ ಕೂಡಲೇ ಶಾಲೆಗೆ ತೆರಳಿ ಶಿಕ್ಷನನ್ನು ಬಂಧಿಸಲಾಗಿದ್ದು ಆತನ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ’ ಎಂದರು.

ಪೋಕ್ಸೊ ಸೇರಿದಂತೆ ಶಿಕ್ಷಕನ ವಿರುದ್ಧ ಅನೇಕ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಶಾಲಾ ಆವರಣದಲ್ಲಿನ ವಸ್ತುಗಳನ್ನು ಧ್ವಂಸಗೊಳಿಸಿದ್ದಕ್ಕೆ ಅನೇಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.