ವಡೋದರ:ಕೈಗಾರಿಕೆ ಮತ್ತು ವೈದ್ಯಕೀಯ ಬಳಕೆಗಾಗಿ ಗ್ಯಾಸ್ ಸಿದ್ಧಪಡಿಸುವಕಂಪನಿಯಲ್ಲಿ ಸ್ಫೋಟ ಸಂಭವಿಸಿ 5 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.
ಗುಜರಾತ್‌ನ ವಡೋದರದ ಪಡರಾ ಪ್ರದೇಶದಲ್ಲಿರುವ ಗ್ಯಾಸ್ ಕಂಪನಿಯಲ್ಲಿ ಶನಿವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದೆ. ಏಮ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ 11 ಗಂಟೆ ಸುಮಾರಿಗೆ ಸ್ಫೋಟ ಆಗಿರುವುದಾಗಿ ವಡು ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಸ್ಥಳದಲ್ಲಿಯೇ ಐವರು ಸಾವಿಗೀಡಾಗಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳದಲ್ಲಿದ್ದು ಪರಿಸ್ಥಿತಿ ನಿಯಂತ್ರಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.