ನವದೆಹಲಿ: ಹಿರಿಯ ರಾಜಕಾರಣಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಕಾಂಗ್ರೆಸ್‌ನಿಂದ ನಿರ್ಗಮಿಸಿರುವುದಾಗಿ ಘೋಷಿಸಿದ ಬೆನ್ನಿಗೇ ಅವರು ಪಕ್ಷವೊಂದನ್ನು ಸ್ಥಾಪಿಸುವುದಾಗಿ ಹೇಳಿದ್ದಾರೆ.
‘ಬಿಜೆಪಿಯೊಂದಿಗೆ ಸಂಪರ್ಕದಲ್ಲಿಲ್ಲ. ಆ ಪಕ್ಷವನ್ನು ಸೇರುವುದಿಲ್ಲ’ ಎಂದು ಸ್ಪಷ್ಟಪಡಿಸಿರುವ ಆಜಾದ್, ತಮ್ಮದೇ ಹೊಸ ಪಕ್ಷವನ್ನು ಸ್ಥಾಪಿಸುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಹೊಸ ಪಕ್ಷವನ್ನು ಸ್ಥಾಪಿಸುವುದಾಗಿ ಅವರು ಹೇಳಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್‌ನ ಪ್ರಮುಖ ನಾಯಕರಾಗಿದ್ದ ಗುಲಾಂ ನಬಿ ಆಜಾದ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಪಕ್ಷದ ಎಲ್ಲ ಹುದ್ದೆಗಳಿಗೆ ಶುಕ್ರವಾರ ರಾಜೀನಾಮೆ ನೀಡಿದರು. ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರವಾನಿಸಿದ ರಾಜೀನಾಮೆ ಪತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಆಜಾದ್, ‘ಕಳೆದ ಎಂಟು ವರ್ಷಗಳಲ್ಲಿ ಕಾಂಗ್ರೆಸ್ ನಾಯಕತ್ವದ ಚುಕ್ಕಾಣಿಯನ್ನು ಗಂಭೀರವಲ್ಲದ ವ್ಯಕ್ತಿಯೊಬ್ಬರ ಕೈಗೆ ನೀಡಲು ಯತ್ನಗಳು ನಡೆದವು. ಪಕ್ಷಕ್ಕೊಸ್ಕರ ಜೀವನವನ್ನೇ ಮುಡಿಪಾಗಿಟ್ಟ ಪ್ರಮುಖ ನಾಯಕರನ್ನು ಕಡೆಗಣಿಸಲಾಯಿತು. ಕಾಂಗ್ರೆಸ್‌ನ ಇಂದಿನ ಪರಿಸ್ಥಿತಿಗೆ ಇದೆಲ್ಲವೂ ಕಾರಣ’ ಎಂದು ತಿಳಿಸಿದ್ದಾರೆ.
ಇವುಗಳನ್ನೂ ಓದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.