ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿರುವುದು ದುಃಖ ಮತ್ತು ದುರದೃಷ್ಟಕರ ವಿಚಾರವಾಗಿದೆ, ಆದರೆ ನಾವು ಅದನ್ನು ಒಪ್ಪಿಕೊಳ್ಳಬೇಕು ಎಂದು ಡೆಮಾಕ್ರೆಟಿಕ್ ಪ್ರೊಗ್ರೆಸ್ಸಿವ್ ಆಜಾದ್ ಪಕ್ಷದ ಮುಖ್ಯಸ್ಥ ಗುಲಾಂ ನಬಿ ಆಜಾದ್ ಹೇಳಿದ್ದಾರೆ.
ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಪೀಠವು ನೀಡಿದ ತೀರ್ಪಿನಿಂದ ಆ ಪ್ರದೇಶದ ಜನರಿಗೆ ಸಂತೋಷವಾಗಿಲ್ಲ, ಆದರೂ ತೀರ್ಪನ್ನು ಒಪ್ಪಿಕೊಳ್ಳಬೇಕಿದೆ ಎಂದು ಅವರು ಹೇಳಿದ್ದಾರೆ.
ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಒಮರ್ ಅಬ್ದುಲ್ಲಾ ಅವರು, ‘ನಿರಾಶೆಯಾದರೂ ನಿರಾಸೆಯಾಗಲಿಲ್ಲ. ಹೋರಾಟ ಮುಂದುವರಿಯಲಿದೆ. ಇಲ್ಲಿಗೆ ಬರಲು ಬಿಜೆಪಿಗೆ ದಶಕಗಳೇ ಬೇಕಾಯಿತು. ನಾವು ದೀರ್ಘಾವಧಿಗೆ ಸಹ ಸಿದ್ಧರಾಗಿದ್ದೇವೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.