ರಾಯ್‌ಪುರ: ಪೊಲೀಸರು ಮತ್ತು ನಕ್ಸಲರ ನಡುವಿನ ಗುಂಡಿನ ಚಕಮಕಿಯಲ್ಲಿ ಆರು ತಿಂಗಳ ಮಗುವೊಂದು ಮೃತಪಟ್ಟಿದ್ದು, ಮಗುವಿನ ತಾಯಿ ಗಾಯಗೊಂಡ ಘಟನೆ ಛತ್ತೀಸಗಢದ ಬಿಜಾಪುರದಲ್ಲಿ ನಡೆದಿದೆ.
ಘಟನೆಯಲ್ಲಿ ಇಬ್ಬರು ಜಿಲ್ಲಾ ಮೀಸಲು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರ ತಂಡವು ನಕ್ಸಲ್ ನಿಗ್ರಹದ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ ಗ್ಯಾಂಗಲೂರ್ ಪೊಲೀಸ್ ಠಾಣೆ ವ್ಯಾಪ್ತಿಯ ಮುಟವಂದಿ ಗ್ರಾಮದ ಬಳಿಯ ಕಾಡಿನಲ್ಲಿ ಗುಂಡಿನ ಚಕಮಕಿ ನಡೆದಿದೆ.
ಗಾಯಗೊಂಡ ಮಹಿಳೆ ಮತ್ತು ಇಬ್ಬರು ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.