ಗುರುಗ್ರಾಮ: ಪರೀಕ್ಷೆ ಬರೆಯಲೆಂದು ಮನೆಯಿಂದ ಬಂದಿದ್ದ 24 ವರ್ಷದ ಯುವತಿ ಮೇಲೆ ದೂರದ ಸೋದರ ಸಂಬಂಧಿಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದುಪೊಲೀಸರು ತಿಳಿಸಿದ್ದಾರೆ.
ಎರಡು ತಿಂಗಳ ಹಿಂದೆ ಯುವತಿಯು ಪರೀಕ್ಷೆ ಬರೆಯಲುಮಹೇಂದ್ರಗಢದಿಂದ ಬಂದಿದ್ದಾಗ ಆರೋಪಿಯು ಒಟ್ಟಿಗೆ ತಂಗಲು ಯುವತಿಯನ್ನು ಹೋಟೆಲ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿ ಯಾರಿಗೂ ಹೇಳಬಾರದು ಎಂದು ಬೆದರಿಕೆಯೊಡ್ಡಿದ್ದಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸೆಪ್ಟೆಂಬರ್ 22ರಂದು ಘಟನೆ ನಡೆದಿದ್ದು, ಸಂತ್ರಸ್ತೆಯು ಮಹೇಂದ್ರಗಢದಲ್ಲಿ ನೀಡಿರುವ ದೂರಿನ ಮೇರೆಗೆ ಭಾನುವಾರ ಗುರುಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣವನ್ನು ಗುರುಗ್ರಾಮದ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ಪ್ರಾಥಮಿಕ ಹಂತದ ತನಿಖೆ ಕೈಗೊಳ್ಳಲಾಗಿದೆ ಮತ್ತು ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿ ನೀಡಿರುವ ದೂರಿನ ಮೇರೆಗೆತನಿಖೆ ಕೈಗೊಂಡಿದ್ದು, ಆರೋಪಿಯನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.