ಗುರುಗ್ರಾಮ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಗುರುಗ್ರಾಮದ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ ತಲಾ ₹1.5 ಲಕ್ಷ ದಂಡ ವಿಧಿಸಿ ಆದೇಶಿಸಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಇಲ್ಲಿನ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಶ್ವನಿಕುಮಾರ್ ಅವರು ಈ ಇಬ್ಬರಿಗೆ ಬುಧವಾರ ಶಿಕ್ಷೆ ಪ್ರಕಟಿಸಿದ್ದಾರೆ ಎಂದು ತಿಳಿಸಿದ್ದಾರೆ.
ತನ್ನ 15 ವರ್ಷ ವಯಸ್ಸಿನ ಮಗಳ ಮೇಲೆ ಇಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ, ಬಾಲಕಿಯ ತಂದೆ 2021ರ ಮೇ 31ರಂದು ಪೊಲೀಸರಿಗೆ ದೂರು ನೀಡಿದ್ದರು.
ಉತ್ತರ ಪ್ರದೇಶದ ಫರುಖ್ಖಾಬಾದ್ ನಿವಾಸಿಗಳಾದ ಆರೋಪಿಗಳ ವಿರುದ್ಧ ಐಪಿಸಿ ಹಾಗೂ ಪೋಕ್ಸೊ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದ ಪೊಲೀಸರು, 2021ರ ಜುಲೈ 11ರಂದು ಇಬ್ಬರನ್ನು ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.