ADVERTISEMENT

ಜ್ಞಾನವಾಪಿ ಮಸೀದಿ ಸಮೀಕ್ಷೆ: ವರದಿ ಕೇಳಿ 11 ಅರ್ಜಿ

ಪಿಟಿಐ
Published 25 ಜನವರಿ 2024, 20:27 IST
Last Updated 25 ಜನವರಿ 2024, 20:27 IST
<div class="paragraphs"><p>ಎಎಸ್‌ಐ ತಂಡ ಜ್ಞಾನವಾಪಿ ಮಸೀದಿ ಆವರಣದಲ್ಲಿ ಸಮೀಕ್ಷೆ ನಡೆಸಿದ್ದ ಸಂದರ್ಭದ ಚಿತ್ರ</p></div>

ಎಎಸ್‌ಐ ತಂಡ ಜ್ಞಾನವಾಪಿ ಮಸೀದಿ ಆವರಣದಲ್ಲಿ ಸಮೀಕ್ಷೆ ನಡೆಸಿದ್ದ ಸಂದರ್ಭದ ಚಿತ್ರ

   

–ಪಿಟಿಐ ಚಿತ್ರ

ವಾರಾಣಸಿ: ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ನಡೆಸಿದ ಸಮೀಕ್ಷೆಯ ವರದಿಯನ್ನು ಕೇಳಿ 11 ಮಂದಿ ಅರ್ಜಿ ಸಲ್ಲಿಸಿದ್ದಾರೆ ಎಂದು ಹಿಂದೂ ಅರ್ಜಿದಾರರ ಪರ ವಕೀಲ ಮದನ್ ಮೋಹನ್ ಯಾದವ್ ತಿಳಿಸಿದ್ದಾರೆ.

ADVERTISEMENT

ಅರ್ಜಿಗಳ ಪರಿಶೀಲನೆಯ ನಂತರ ಅವರಿಗೆ ವರದಿಯ ಪ್ರತಿಯನ್ನು ನೀಡುವ ಸಾಧ್ಯತೆ ಇದೆ ಎಂದು ಯಾದವ್ ಹೇಳಿದ್ದಾರೆ. ಜಿಲ್ಲಾ ನ್ಯಾಯಾಲಯವು 2023ರ ಜುಲೈ 21ರಂದು ಆದೇಶ ನೀಡಿದ ನಂತರ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಎಎಸ್‌ಐ ವೈಜ್ಞಾನಿಕ ಸಮೀಕ್ಷೆ ಕೈಗೊಂಡಿತ್ತು. ಅದಾಗಲೇ ಇದ್ದ ಹಿಂದೂ ದೇವಸ್ಥಾನದ ಮೇಲೆ ಮಸೀದಿಯನ್ನು ನಿರ್ಮಿಸಲಾಯಿತೇ ಎಂಬುದನ್ನು ಪರಿಶೀಲಿಸಲು ಸಮೀಕ್ಷೆ ನಡೆಸಲಾಗಿತ್ತು.

ಹಿಂದೂ ಅರ್ಜಿದಾರರ ಪರ ವಕೀಲರು, ಅಂಜುಮಾನ್ ಇಂತೆಜಾಮಿಯಾ ಮಸೀದಿ ಸಮಿತಿ, ಕಾಶಿ ವಿಶ್ವನಾಥ ಟ್ರಸ್ಟ್‌, ರಾ‌ಜ್ಯ ಸರ್ಕಾರ, ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಕಾರ್ಯದರ್ಶಿ ಸೇರಿದಂತೆ 11 ಮಂದಿ ವರದಿಯ ಪ್ರತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ಯಾದವ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.