ಲಖನೌ: ವಾರಾಣಸಿಯ ಕಾಶಿ ವಿಶ್ವನಾಥ ಮಂದಿರದ ಬಳಿಯ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿರುವುದು ಸಂತಸದ ಸುದ್ದಿ ಎಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಹೇಳಿದ್ದಾರೆ.
ಜ್ಞಾನವಾಪಿ ಮಸೀದಿ ಆವರಣದಲ್ಲಿ ಶಿವಲಿಂಗ ಪತ್ತೆಯಾಗಿರುವುದು ನನಗೆ ಮತ್ತು ದೇಶದ ಎಲ್ಲ ಶಿವ ಭಕ್ತರಿಗೆ ಸಂತಸದ ಸುದ್ದಿ. ಸತ್ಯ ಬೆಳಕಿಗೆ ಬಂದಿದೆ. ಈ ವಿಚಾರದಲ್ಲಿ ನ್ಯಾಯಾಲಯದ ಆದೇಶವನ್ನು ಸ್ವಾಗತಿಸುತ್ತೇವೆ ಮತ್ತು ಪಾಲಿಸುತ್ತೇವೆ ಎಂದು ಅವರು ಹೇಳಿರುವುದಾಗಿ ‘ಎಎನ್‌ಐ’ ಸುದ್ದಿಸಂಸ್ಥೆಯ ಉತ್ತರ ಪ್ರದೇಶ ಬ್ಯುರೋ ಟ್ವೀಟ್ ಮಾಡಿದೆ.
ಜ್ಞಾನವಾಪಿ ಮಸೀದಿ ಆವರಣದಲ್ಲಿ ನ್ಯಾಯಾಲಯದ ಆದೇಶದಂತೆ ಶನಿವಾರದಿಂದ ಆರಂಭವಾಗಿದ್ದ ಸಮೀಕ್ಷೆ ಸೋಮವಾರ ಬೆಳಿಗ್ಗೆ ಕೊನೆಗೊಂಡಿತ್ತು. ಬಳಿಕ ಮಾತನಾಡಿದ್ದ ಹಿಂದೂ ಬಣದ ವಕೀಲರೊಬ್ಬರು, ಮಸೀದಿಯ ಒಳಗಿನ ಬಾವಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಹೇಳಿದ್ದರು. ಶಿವಲಿಂಗದ ರಕ್ಷಣೆ ಕೋರಿ ಸಿವಿಲ್ ನ್ಯಾಯಾಲಯಕ್ಕೆ ಹೋಗುವುದಾಗಿ ಅವರು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.