ADVERTISEMENT

ಸುಪ್ರೀಂ ಕೋರ್ಟ್‌ನ 6 ನ್ಯಾಯಮೂರ್ತಿಗಳಿಗೆ ಶಂಕಿತ ಎಚ್‌1ಎನ್‌1 ಸೋಂಕು?

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2020, 8:04 IST
Last Updated 25 ಫೆಬ್ರುವರಿ 2020, 8:04 IST
   

ನವದೆಹಲಿ: ಸುಪ್ರೀಂ ಕೋರ್ಟ್‌ನ ಆರು ನ್ಯಾಯಮೂರ್ತಿಗಳಿಗೆ ಶಂಕಿತ ಎಚ್‌1ಎನ್‌1 ಸೋಂಕು ತಗುಲಿದೆ ಎಂದು ವರದಿಯಾಗಿದೆ.

‘ಇಂದು ಸುಪ್ರೀಂ ಕೋರ್ಟ್‌ ಸಭಾಂಗಣಕ್ಕೆ ಆಗಮಿಸಿದ ವಕೀಲರಿಗೆ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಅವರು ನ್ಯಾಯಮೂರ್ತಿಗಳಿಗೆ ಸೋಂಕು ತಗುಲಿರುವ ವಿಚಾರವನ್ನು ತಿಳಿಸಿದ್ದಾರೆ,’ ಎಂದು ‘ಬಾರ್‌ ಅ್ಯಂಡ್‌ ಬೆಂಚ್‌’ ವರದಿ ಮಾಡಿದೆ.

ಇದೇ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳು ಮುಖ್ಯನ್ಯಾಯಮೂರ್ತಿ ಎಸ್‌.ಎ ಬೋಬಡೆ ಅವರೊಂದಿಗೆ ಸಭೆ ನಡೆಸಿದ್ದಾರೆ. ಸೋಂಕು ಇತರರಿಗೆ ಹರಡದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಿದ್ದಾರೆ.

ADVERTISEMENT

ಎಚ್‌1ಎನ್‌1 ಹರಡುವುದನ್ನು ನಿಯಂತ್ರಿಸಲು ಸುಪ್ರೀಂ ಕೋರ್ಟ್‌ನ ವಕೀಲರು ಮತ್ತು ಸಿಬ್ಬಂದಿಗೆ ರೋಗ ನಿರೋಧಕಗಳನ್ನು ನೀಡುವ ಕುರಿತು ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಮುಖ್ಯನ್ಯಾಯಮೂರ್ತಿಗಳು ಸುಪ್ರೀಂ ಕೋರ್ಟ್‌ನ ಬಾರ್‌ ಅಸೋಸಿಯೇಷನ್‌ನ ಅಧ್ಯಕ್ಷ ದುಷ್ಯಂತ್‌ ದೇವ್‌ ಅವರೊಂದಿಗೆ ಚರ್ಚೆ ಮಾಡುವ ಸಾಧ್ಯತೆಗಳೂ ಇವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.